• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಲಾಕ್‌ಡೌನ್: ಲಂಚ ಪಡೆದ ಅಧಿಕಾರಿಗಳು, ಸಿಬ್ಬಂದಿ ಅಮಾನತು

|

ಬೆಂಗಳೂರು, ಏ. 03: ಇಡೀ ಜಗತ್ತು ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿದೆ. ಇಂತಹ ಸಂದರ್ಭದಲ್ಲಿಯೂ ಕೆಲ ಅಧಿಕಾರಿಗಳ ಲಂಚ ಬಾಕತನ ಕಡಿಮೆಯಾಗಿಲ್ಲ. ಬಹಳಷ್ಟು ಜನ ಸಾಮಾನ್ಯರು ಒಂದೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡುತ್ತಿದ್ದವರಿಂದ ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಖಡಕ್ ಸಂದೇಶವನ್ನು ಕೊಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್‌ಪೆಕ್ಟರ್‌ಗಳನ್ನು ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ಅವರು ಅಮಾನತು ಮಾಡಿದ್ದಾರೆ. ಬ್ರೇಕ್ ಇನ್ಸ್‌ಪೆಕ್ಟರ್‌ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು. ಅವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಎಂಬುವನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕ ಸಜಿತ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರಿಯಪ್ಪ ಅವರಿಂದ 1,250 ರೂ., ಜಯಣ್ಣ ಅವರಿಂದ 1100 ರೂ., ಹಾಗೂ ವಿವೇಕ್ ಅವರಿಂದ 800 ರೂ., ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ 12350 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರೈತರಿಗೆ ಅನಗತ್ಯವಾಗಿ ಸಾರಿಗೆ ಇಲಾಖೆಯ ಕೆಲ ಅಧಿಕಾರಿಗಳು ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

English summary
RTO officials have been suspended for allegedly bribing people with essential goods. Transport department officials suspended following bribery of motorists who were transporting vegetables.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X