ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಏಕತೆಗಾಗಿ ಓಟ ಯಶಸ್ವಿ
ಬೆಂಗಳೂರು, ಅಕ್ಟೋಬರ್ 31: ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ಜಯಂತಿ ಅಂಗವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವತಿಯಿಂದ ಮಾನ್ಯತಾ ಟೆಕ್‌ಪಾರ್ಕ್‌ನಿಂದ ಬೃಹತ್ ಏಕತೆಗಾಗಿ ಓಟವನ್ನು ಏರ್ಪಡಿಸಲಾಗಿತ್ತು.
ಕೇಂದ್ರ ಸಚಿವ ಡಿವಿ ಸದಾನಂದಗೌಡ ಹಾಗೂ ಮಲ್ಲೇಶ್ವರ ಶಾಸಕ ಡಾ. ಸಿಎನ್ ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಜನರು ಮ್ಯಾರಥಾನ್‌ನಲ್ಲಿ ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದರು. ಸುಮಾರು ಮೂರು ಕಿ.ಮೀ ಉದ್ದದ ಮ್ಯಾರಥಾನ್‌ನಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು.
ಅಷ್ಟೇ ಅಲ್ಲದೆ ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷರಾದ ಪಿಎನ್ ಸದಾಶಿವ, ಶಾಸಕ ರವಿಸುಬ್ರಹ್ಮಣ್ಯ ನೇತೃತ್ವದಲ್ಲಿ ಜಯನಗರದ ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಿಂದ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಏಕತಾ ಓಟ ನಡೆಯಿತು.

ಜಯನಗರದ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಹಿಡಿದು ರಾಷ್ಟ್ರೀಯತೆ ಮತ್ತು ರಾಷ್ಟ್ರೀಯ ಏಕತೆಯ ಸಂದೇಶ ಸಾರಿದರು.












Click it and Unblock the Notifications