ಅನಂತ್ ಕುಮಾರ್ ಆರೋಗ್ಯ ವಿಚಾರಿಸಿದ ಆರ್.ವಿ.ದೇಶಪಾಂಡೆ

ಬೆಂಗಳೂರು, ಅಕ್ಟೋಬರ್ 29 : ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಆರೋಗ್ಯ ವಿಚಾರಿಸಿದರು. ಅನಾರೋಗ್ಯದಿಂದ ಬಳಲುತ್ತಿರುವ ಅನಂತ್ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರ್.ವಿ.ದೇಶಪಾಂಡೆ ಅವರು ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ ಕುಮಾರ್ ಅವರ ಯೋಗಕ್ಷೇಮವನ್ನು ವಿಚಾರಿಸಿದರು.

ಅನಂತ್‍ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, 'ಅನಂತ್‍ ಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ' ಎಂದು ಹಾರೈಸಿದರು.

RV Deshpande visits hospital to inquire about Ananth Kumar health

ಇದೇ ವೇಳೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಹೆಸರಾಂತ ವೈದ್ಯರಾದ ಡಾ.ಶ್ರೀನಾಥ್ ಅವರೊಂದಿಗೂ ಸಚಿವ ದೇಶಪಾಂಡೆ ಅವರು ಮಾತುಕತೆ ನಡೆಸಿ, ಕೇಂದ್ರ ಸಚಿವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಕೇಂದ್ರ ಸಚಿವರ ಭೇಟಿ : ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಅನಂತ್ ಕುಮಾರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

ಪತ್ರಿಕಾ ಪ್ರಕಟಣೆ : ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಕಚೇರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಅನಂತ್ ಕುಮಾರ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+