ಆತ್ಮಹತ್ಯೆ ಪ್ರಕರಣ ಸಿಎಂ ಸಿದ್ದುಗೆ ರಾಮದಾಸ್ ಪತ್ರ
ಬೆಂಗಳೂರು, ಫೆ.16 : ಆತ್ಮಹತ್ಯೆ ಪ್ರಕರಣದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮಾಜಿ ಸಚಿವ ಎಸ್.ಎ.ರಾಮದಾಸ್, ಪ್ರೇಮಕುಮಾರಿ ತಮ್ಮ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಎಸ್ಎ ರಾಮದಾಸ್ ಫೆ.14ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಚಿಕ್ಕಮಗಳೂರಿನ ಪ್ರೇಮಕುಮಾರಿ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ರಾಮದಾಸ್ ಮನವಿ ಮಾಡಿದ್ದಾರೆ. [ರಾಮದಾಸ್ ವಿದೇಶಕ್ಕೆ ಹಾರಲು ಸಜ್ಜು]

ಪ್ರೇಮಕುಮಾರಿ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದರಿಂದ ನನ್ನ ಘನತೆ ಮತ್ತು ರಾಜಕೀಯ ಜೀವನಕ್ಕೆ ಧಕ್ಕೆ ಉಂಟಾಗಿದೆ. ರಾಜಕೀಯ ಪ್ರೇರಿತವಾಗಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುವುದಕ್ಕೆ ರಾಜಕೀಯ ಪ್ರೇರಣೆಯಾಗಿದೆ ಎಂದು ರಾಮದಾಸ್ ಪತ್ರದಲ್ಲಿ ವಿವರಣೆ ನೀಡಿದ್ದಾರೆ.[ಪ್ರೇಮ ಕುಮಾರಿ ಯಾರು]
ಪ್ರೇಮಕುಮಾರಿ ಅವರು ನನ್ನ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು, ಇದಕ್ಕೆ ಒಪ್ಪದಿದ್ದಾಗ ಸಂಬಂಧಿಕರ ಜೊತೆ ಸೇರಿ ಬ್ಲಾಕ್ ಮೇಲೆ ಮಾಡುತ್ತಿದ್ದಾರೆ ಎಂದು ಸಿಎಂಗೆ ಬರೆದಿರುವ ಪತ್ರದಲ್ಲಿ ರಾಮದಾಸ್ ಆರೋಪಿಸಿದ್ದಾರೆ.
ಈ ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಿ. ತೇಜೋವಧೆಗೆ ಒಳಗಾಗಿರುವ ತಮಗೆ ನ್ಯಾಯ ದೊರಕಿಸಿಕೊಡಿ ಎಂದು ರಾಮದಾಸ್ ಮನವಿ ಮಾಡಿದ್ದಾರೆ.












Click it and Unblock the Notifications