ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೆ ಪೆಟ್ಟು; ಆಸ್ಪತ್ರೆಯಲ್ಲಿ ಹಾಸಿಗೆಗೆ ಪರದಾಟ
ಬೆಂಗಳೂರು, ಏಪ್ರಿಲ್ 23: ಈಚೆಗಷ್ಟೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ವೃಕ್ಷಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೆ ಪೆಟ್ಟು ಬಿದ್ದಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಪರದಾಡುವ ಸ್ಥಿತಿ ಏರ್ಪಟ್ಟಿತ್ತು.
ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಅವರ ಬೆನ್ನುಮೂಳೆ ಮುರಿತವಾಗಿದ್ದು, ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗಕ್ಕೆ ತೀವ್ರ ಏಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಲು ಎರಡು ಗಂಟೆಯಿಂದ ಪರದಾಡುವಂತಾಯಿತು.

ಸದ್ಯಕ್ಕೆ ಬೆಂಗಳೂರಿನ ಬಹುಪಾಲು ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳು ತುಂಬಿ ತುಳುಕುತ್ತಿರುವುದರಿಂದ ನಾನ್ ಕೋವಿಡ್ ಆಸ್ಪತ್ರೆಗಳು ಲಭ್ಯವಾಗಿಲ್ಲ. ಹೀಗಾಗಿ ಸತತ ಎರಡು ಗಂಟೆಗಳಿಂದಲೂ ಹುಡುಕಾಟ ನಡೆಸಲಾಗಿತ್ತು. ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ಅಪೋಲೋ ಆಸ್ಪತ್ರೆ ವೈದ್ಯರೂ ನಾನ್ ಕೋವಿಡ್ ಹಾಸಿಗೆ ಹೊಂದಿಸಲು ನಿರಂತರ ಪ್ರಯತ್ನಿಸಿದ್ದರು.
ಅಂತಿಮವಾಗಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಹಾಸಿಗೆ ಒದಗಿಸಲಾಗಿದೆ. ಸದ್ಯಕ್ಕೆ ಎಮರ್ಜೆನ್ಸಿ ವಾರ್ಡ್ ಗೆ ಶಿಫ್ಟ್ ಮಾಡಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.












Click it and Unblock the Notifications