ಸಾಲುಮರದ ತಿಮ್ಮಕ್ಕ ಅವರಿಗೆ ಶಸ್ತ್ರ ಚಿಕಿತ್ಸೆ
ಬೆಂಗಳೂರು, ಡಿಸೆಂಬರ್ 09: ಮನೆಯಲ್ಲಿ ಜಾರಿ ಬಿದ್ದು ಅನಾರೋಗ್ಯಕ್ಕೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ವೃಕ್ಷಮಾತೆ ಖ್ಯಾತಿಯ ಸಾಲು ಮರದ ತಿಮ್ಮಕ್ಕ ಅವರು ಕಳೆದ ಭಾನವಾರ ಮನೆಯಲ್ಲಿ ಜಾರಿ ಬಿದ್ದು ಬೆನ್ನು ಮೂಳೆಗೆ ತೀವ್ರತರ ಪೆಟ್ಟಾಗಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು.
ಸಾಲುಮರದ ತಿಮ್ಮಕ್ಕಗೆ ಅನಾರೋಗ್ಯ: ಅಪೋಲೊ ಆಸ್ಪತ್ರೆಗೆ ದಾಖಲು
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಬೆಳಗ್ಗೆ ಸಾಲುಮರದ ತಿಮ್ಮಕ್ಕ ಅವರನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಡಾ. ಸಂಜಯ್ ಪೈ ನೇತೃತ್ವದ ತಂಡ ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದಾರೆ.
ಬೆಳಗ್ಗೆ ಏಳು ಗಂಟೆಗೆ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಸದ್ಯಕ್ಕೆ ಆರೋಗ್ಯವಾಗಿದ್ದಾರೆ ಎಂದು ಸಾಲುಮರದ ತಿಮ್ಮಕ್ಕನ ದತ್ತುಪುತ್ರ ಉಮೇಶ್ ಒನ್ ಇಂಡಿಯಾ ಕನ್ನಡಗೆ ತಿಳಿಸಿದ್ದಾರೆ.