Lok Sabha Election 2024: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಿಂದ ಸಾಧು ಕೋಕೊಲಾಗೆ ಕಾಂಗ್ರೆಸ್‌ ಟಿಕೆಟ್‌?

ಬೆಂಗಳೂರು, ಮಾರ್ಚ್‌, 11: ಲೋಕಸಭೆ ಚುನಾವಣೆ ಹಿನ್ನೆಲೆ ದೇಶಾದ್ಯಂತ ಎಲ್ಲಾ ಪಕ್ಷಗಳ ನಾಯಕರು ಈಗಿನಿಂದಲೇ ಅಬ್ಬರದ ಪ್ರಚಾರವನ್ನು ಆರಂಭಿಸಿದ್ದಾರೆ. ಇನ್ನು ಸಿನಿ ತಾರೆಯರು ಕೂಡ ರಾಜಕೀಯದತ್ತ ಮುಖ ಮಾಡಡುತ್ತಿದ್ದಾರೆ.

ಹಾಗೆಯೇ ಇದೀಗ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದು ಸ್ಯಾಂಡಲ್‌ವುಡ್ ಖ್ಯಾತ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಸೋಮವಾರ ಇಂದು ಮಾರ್ಚ್‌ 11) ಹೇಳಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ಲಭ್ಯವಾಗಿದೆ.

Sadhu Kokila I am a Congress ticket aspirant from Bengaluru Central Constituency

ಸಾಧು ಕೋಕಿಲ ಅವರು, ನಾನೊಬ್ಬ ಕಲಾವಿದನಾಗಿರುವರಿಂದ ಎಲ್ಲಾ ಸಮುದಾಯಗಳ ಜನ ನನ್ನನ್ನು ಇಷ್ಟಪಡುತ್ತಾರೆ. ನಾನು ಯಾವತ್ತೂ ಜನರನ್ನು ತಾರತಮ್ಯದಿಂದ ನೋಡಿದವನಲ್ಲ, ಎಲ್ಲ ವರ್ಗದವರನ್ನು ಸಮಾನವಾಗಿ ನೋಡುತ್ತೇನೆ ಎಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ತಿಳಿಸಿದ್ದಾರೆ ಅಂತಾ ತಿಳಿದುಬಂದಿದೆ.

ಇನ್ನು "ಚಾಮರಾಜಪೇಟೆ ಮತ್ತು ಶಿವಾಜಿನಗರದಲ್ಲಿರುವ ಕ್ರೈಸ್ತರೆಲ್ಲ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಟಿಕೆಟ್ ಸಿಕ್ಕರೆ ಗೆದ್ದೇ ಗೆಲ್ಲುತ್ತೇನೆ. ಟಿಕೆಟ್ ಆಕಾಂಕ್ಷಿ ಆಗಿರುವುದು ನಿಜವಾದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ," ಎಂದು ಹೇಳಿದ್ದಾರೆ.

ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದು, ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 15 ಲಕ್ಷ ಕ್ರಿಶ್ಚಿಯನ್ ಸಮುದಾಯದವರು ಇರುವುದರಿಂದ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ತಿಳಿಸಿದ್ದಾರೆ ಅಂತಾ ಮಾಹಿತಿಯೊಂದು ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+