ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊವಿಡ್-19: ಸೇಂಟ್ ಜಾನ್ಸ್ ಆಸ್ಪತ್ರೆಯಿಂದ 200 ಹಾಸಿಗೆಗಳ ವ್ಯವಸ್ಥೆ

|
Google Oneindia Kannada News

ಬೆಂಗಳೂರು, ಏಪ್ರೀಲ್ 1: ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊವಿಡ್-19 ಸಂಬಂಧಿಸಿದ ಚಿಕಿತ್ಸೆಗಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ 200 ಹಾಸಿಗೆಗಳ ಮೀಸಲಿರಿಸಿದೆ. ಸೆಂಟ್ ಜಾನ್ಸ್ ನ್ಯಾಷನಲ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಅಧ್ಯಕ್ಷ ಡಾ. ಪಾಲ್ ಪಾರ್ಥಜಾಮ್ ಅವರಿಂದ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪತ್ರ ಸ್ವೀಕರಿಸಿದರು.

ಕೊರೋನಾ ವೈರೆಸ್ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಸಾಮರ್ಥ್ಯ ನಿಭಾಯಿಸಲು ಎಲ್ಲಾ ರೀತಿಯ ಪೂರ್ವಸಿದ್ದತೆಗಳನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊವಿಡ್-19 ಸಂಬಂಧಿಸಿದ ಚಿಕಿತ್ಸೆಗಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ 200 ಆಸನಗಳನ್ನು ಮೀಸಲಿರಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ್ ರವರು ತಿಳಿಸಿದರು.

ಕೋವಿಡ್-19 ಚಿಕಿತ್ಸೆಗಾಗಿ ಮೀಸಲಿರಿಸಿರುವ ಬ್ಲಾಕ್‌ನಲ್ಲಿ 200 ಆಸನಗಳ ವ್ಯವಸ್ಥೆ, ಅವಶ್ಯಕ ವೆಂಟಿಲೇರ್ಸ್, ಐಸೋಲೇಷನ್ ಕೊಠಡಿ, ಐಸಿಯು ಕೊಠಡಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊದಗಿಸಿಕೊಂಡಿದ್ದಾರೆ. ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Saint Johns Hospital Reserve 200 Special Beds For Coronavirus Patients

ಸೆಂಡ್ ಜಾನ್ಸ್ ಆಸ್ಪತ್ರೆ ನಿರ್ದೇಶಕ ಡಾ. ಪಾಲ್ ಪಾರ್ಥಜಾಮ್ ರವರು ಮಾತನಾಡಿ, ಕೋವಿಡ್-19ಗೆ ಚಿಕಿತ್ಸೆ ನೀಡುವ ಸಲುವಾಗಿ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 200 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಸೋಂಕಿತರು, ಶಂಕಿತರಿಗೆ ಪ್ರತ್ಯೇಕ ಐಸೋಲೇಷನ್ ವಾರ್ಡ್ ನಿರ್ಮಿಸಲಾಗಿದೆ. ಎಲ್ಲಾ ಸಿಬ್ಬಂದಿ, ಅಧಿಕಾರಿಗಳಿಗೂ ಕೊರೋನ ಬಗ್ಗೆ ತರಬೇತಿ ನೀಡಲಾಗಿದೆ. 15 ಐಸಿಯು ಬೆಡ್ ಜೊತೆಗೆ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಮೇಯರ್ ಗೌತಮ್ ಕುಮಾರ್ ಇದ್ದರು.

English summary
Saint Johns Hospital Reserve 200 Special Beds For Coronavirus Patients at Bengaluru. Saint Johns Hospital handover the letter to DCM CN Ashwath Narayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X