ಮಾಜಿ ಮೇಯರ್ ಸಂಪತ್ ರಾಜ್ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಡಿಕೆಶಿ!
ಬೆಂಗಳೂರು, ನವೆಂಬರ್ 01: ಬೆಂಗಳೂರಿನ ಮಾಜಿ ಮೇಯರ್, ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಸಂಪತ್ ರಾಜ್ ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಂಪತ್ ರಾಜ್ ಬಗ್ಗೆ ಮಾತನಾಡಿದರು. "ಸಂಪತ್ ರಾಜ್ ಎಲ್ಲೂ ಹೋಗಿಲ್ಲ, ವೈದ್ಯರ ಸಲಹೆ ಮೇರೆಗೆ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದರು.
"ಆರ್. ಆರ್. ನಗರದಲ್ಲಿ ಚುನಾವಣೆ ಇದೆ. ಹಾಗಾಗಿ ಚುನಾವಣೆಗೆ 2 ದಿನ ಇರುವಾಗ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಮಾಧ್ಯಮಗಳಿಗೆ, ಪತ್ರಿಕೆಗಳಿಗೆ ಸುಳ್ಳು ಸುದ್ದಿಗಳನ್ನು ಕೊಡುತ್ತಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಆರೋಪ ಮಾಡಿದರು.

ಆಸ್ಪತ್ರೆಯಿಂದ ಪರಾರಿ: ಸಂಪತ್ ರಾಜ್‌ಗೆ ಕೋವಿಡ್ ಸೋಂಕು ತಗುಲಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದಾರೆ.
ಸಿಸಿಬಿ ಎಸಿಪಿ ವೇಣುಗೋಪಾಲ್ ಆಸ್ಪತ್ರೆಗೆ ಭೇಟಿ ನೀಡಿದಾಗ ಸಂಪತ್ ರಾಜ್ ಪರಾರಿಯಾಗಿರುವುದು ಪತ್ತೆಯಾಗಿದೆ. ಡಿಸ್ಚಾರ್ಜ್‌ಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಬೇಕು ಎಂಬ ನಿಯಮವನ್ನು ಸಹ ಆಸ್ಪತ್ರೆ ಸಿಬ್ಬಂದಿ ಪಾಲನೆ ಮಾಡಿಲ್ಲ.
ಸಂಪತ್ ರಾಜ್ ಎಲ್ಲೂ ಹೋಗಿಲ್ಲ, ವೈದ್ಯರ ಸಲಹೆ ಮೇರೆಗೆ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
— Karnataka Congress (@INCKarnataka) November 1, 2020
ಆರ್. ಆರ್ ನಗರದಲ್ಲಿ ಚುನಾವಣೆ ಇದೆ. ಹಾಗಾಗಿ ಚುನಾವಣೆಗೆ 2 ದಿನ ಇರುವಾಗ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಮಾಧ್ಯಮಗಳಿಗೆ, ಪತ್ರಿಕೆಗಳಿಗೆ ಸುಳ್ಳು ಸುದ್ದಿಗಳನ್ನು ಕೊಡುತ್ತಿದ್ದಾರೆ.
- @DKShivakumar#KusumaForRRNagar pic.twitter.com/zYHLJHz1TO
ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ಆರೋಪಿ. ಪೊಲೀಸರು ಚಾರ್ಜ್ ಶೀಟ್‌ನಲ್ಲಿಯೂ ಅವರ ಹೆಸರು ಉಲ್ಲೇಖಿಸಿದ್ದಾರೆ. ಕೋವಿಡ್ ಕಾರಣದಿಂದಾಗಿ ಅವರನ್ನು ಪೊಲೀಸರು ಬಂಧಿಸಿರಲಿಲ್ಲ.












Click it and Unblock the Notifications