ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪಿಗೆ ರಸ್ತೆ-ನಾಗಸಂದ್ರ : ಮೆಟ್ರೋ ವೇಳಾಪಟ್ಟಿ ಬದಲಾವಣೆ

|
Google Oneindia Kannada News

ಬೆಂಗಳೂರು, ನವೆಂಬರ್ 25 : ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ಸಂಚಾರ ನಡೆಸುವ ನಮ್ಮ ಮೆಟ್ರೋ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಡಿಸೆಂಬರ್ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ.

ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ಬೆಳಗ್ಗೆ 5 ರಿಂದ ರಾತ್ರಿ 11ರ ತನಕ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಸದ್ಯ, ಈ ಮಾರ್ಗದಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ರೈಲು ಸಂಚಾರವಿದೆ. [ಮೆಟ್ರೋಕ್ಕೆ ಶಂಕರಣ್ಣ ಹೆಸರು: ಇದು ಓದುಗರ ತೀರ್ಮಾನ]

namma metro

ಕೈಗಾರಿಕೆಗಳ ಸಂಘ ಮತ್ತು ಪ್ರಯಾಣಿಕರ ಮನವಿಗೆ ಸ್ಪಂದಿಸಿರುವ ಬಿಎಂಆರ್‌ಸಿಎಲ್ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಿದೆ. ಎರಡು ತಿಂಗಳ ತನಕ ಪ್ರಾಯೋಗಿಕವಾಗಿ ಈ ವೇಳಾಪಟ್ಟಿ ಜಾರಿಯಲ್ಲಿರುತ್ತದೆ. ನಂತರ ಜನರ ಸ್ಪಂದನೆ ನೋಡಿಕೊಂಡು ಮುಂದುವರೆಸಲಾಗುತ್ತದೆ. [ಮಾಗಡಿ ರಸ್ತೆ-ಮೈಸೂರು ರಸ್ತೆ ನಮ್ಮ ಮೆಟ್ರೋ ದರ ಪಟ್ಟಿ]

ಎಷ್ಟು ನಿಮಿಷಕ್ಕೆ ರೈಲು : ಸಂಪಿಗೆ ರಸ್ತೆ-ನಾಗಸಂದ್ರ ಮಾರ್ಗದಲ್ಲಿ ಬೆಳಗ್ಗೆ 5 ರಿಂದ 8 ರವರೆಗೆ ಮತ್ತು ರಾತ್ರಿ 8ರಿಂದ 11ರವರೆಗೆ ಪ್ರತಿ 15 ನಿಮಿಷ ಅಂತರದಲ್ಲಿ ರೈಲುಗಳು ಸಂಚಾರ ನಡೆಸಲಿವೆ. ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಪ್ರತಿ 10 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚಾರ ನಡೆಸಲಿದೆ. [ನಮ್ಮ ಮೆಟ್ರೋ ಇನ್ನು ಮುಂದೆ ಕೆಂಪೇಗೌಡ ಮೆಟ್ರೋ?]

1 ಗಂಟೆ ಸೇವೆ ಕಡಿತ : ಪರೀಕ್ಷಾರ್ಥ ಸಂಚಾರದ ಹಿನ್ನಲೆಯಲ್ಲಿ ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವಿನ ಮೆಟ್ರೋ ರೈಲಿನ ಸೇವೆಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ. ನವೆಂಬರ್ 28ರ ತನಕ ಬೆಳಗ್ಗೆ 8 ರಿಂದ ರಾತ್ರಿ 7ರವರೆಗೆ ಮಾತ್ರ ರೈಲುಗಳು ಸಂಚಾರ ನಡೆಸಲಿವೆ.

English summary
Bangalore Metro Rail Corporation (BMRCL) has announced changes in the timing of the metro rail service in Sampige Road-Nagasandra route. New schedule come into effect from December 1, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X