• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರ್ಕಾರಿ ಗೌರವಗಳೊಂದಿಗೆ ಸಂಚಾರಿ ವಿಜಯ್ ಅಂತ್ಯಸಂಸ್ಕಾರ

|
Google Oneindia Kannada News

ಬೆಂಗಳೂರು, ಜೂನ್ 15: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟ ಬಿ.ವಿಜಯ್ ಕುಮಾರ್ (ಸಂಚಾರಿ ವಿಜಯ್) ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಮೃತ ಸಂಚಾರಿ ವಿಜಯ್‌ರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ, ಕೋವಿಡ್- 19 ಮಾರ್ಗಸೂಚಿಯನ್ನು ಪಾಲಿಸಿ ನೆರವೇರಿಸಲು ಆದೇಶಿಸಿ ರಾಜ್ಯ ಶಿಷ್ಠಾಚಾರ ಇಲಾಖೆ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಪತ್ರ ಹೊರಡಿಸಿದ್ದಾರೆ.

ಸ್ವಗ್ರಾಮ ಪಂಚನಹಳ್ಳಿಯಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ನಟ ಸಂಚಾರಿ ವಿಜಯ್ ವಿಧಿವಶ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ರವೀಂದ್ರ ಕಲಾಕ್ಷೇತ್ರದಿಂದ ಹುಟ್ಟೂರಿನ ಕಡೆ ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ಆಂಬುಲೆನ್ಸ್‌ನಲ್ಲಿ ರವಾನೆ ಮಾಡಲಾಗುತ್ತಿದೆ.

 Sanchari Vijay To Be Cremated With Full State Honours With Covid-19 Guidelines; Karnataka Govt Issues An Order

ಸಿಎಂ ಯಡಿಯೂರಪ್ಪ ಸಂತಾಪ

   ಸಕಲ ಗೌರವದೊಂದಿಗೆ ಅಂತಿಮ ಯಾತ್ರೆಗೆ ಸಿದ್ದತೆ | Oneindia Kannada

   "ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅಂತಿಮ ವಿಧಿ ವಿಧಾನ ಪೊಲೀಸ್ ಗೌರವಗಳೊಂದಿಗೆ ನಡೆಯಲಿದೆ. ಅಂಗಾಂಗ ದಾನ ಮಾಡಲು ಮುಂದೆ ಬಂದ ಅವರ ಕುಟುಂಬಕ್ಕೆ ನಾನು ಕೃತಜ್ಞನಾಗಿದ್ದೇನೆ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ,'' ಎಂದು ಸಿಎಂ ಬಿ.ಎಸ್. ಯಡಿಯುರಪ್ಪ ತಿಳಿಸಿದ್ದಾರೆ.

   English summary
   The state government has ordered of Sanchari Vijay to be Cremated with police honors and the guidelines of Covid-19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X