• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ: 25 ಮಂದಿ ವಿರುದ್ಧ ದೋಷಾರೋಪ ಪಟ್ಟಿ

|

ಬೆಂಗಳೂರು, ಮಾರ್ಚ್‌ 03: ಸ್ಯಾಂಡಲ್ ವುಡ್‌ನ್ನು ಬೆಚ್ಚಿ ಬೀಳಿಸಿದ್ದ ಅಂತಾರಾಷ್ಟ್ರೀಯ ಡ್ರಗ್ ಜಾಲ ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು 2900 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ ಮಾಡಿದ್ದ ಎನ್‌ಸಿಬಿ ಅಧಿಕಾರಿಗಳು ಪತ್ತೆ ಮಾಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಚರ್ಚೆ ತಾರಕ್ಕೇರಿತ್ತು. ಇದೇ ವೇಳೆ ಎರಡು ವರ್ಷದ ಹಿಂದಿನ ಹಳೇ ಡ್ರಗ್ ಪ್ರಕರಣ ಜಾಡು ಹಿಡಿದು ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು ಸರಣಿ ಬಂಧನ ಮಾಡಿದ್ದರು. ಆನಂತರ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದರು.

ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೀರೇನ್ ಖನ್ನಾ, ರಾಹುಲ್ ತೋನ್ಸೆ, ಹ್ಯಾಕರ್ ಶ್ರೀಕೃಷ್ಣ, ಆರ್‌ಟಿಓ ಅಧಿಕಾರಿ ರವಿಶಂಕರ್ ಸೇರಿದಂತೆ ಇಪ್ಪತ್ತೈದಕ್ಕೂ ಹೆಚ್ಚು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದರಲ್ಲಿ ಬಹುತೇಕರು ಜಾಮೀನು ಪಡೆದು ಹೊರಗೆ ಬಂದಿದ್ದು, ಇನ್ನೂ ಕೆಲವರು ಜೈಲಿನಲ್ಲಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 180 ಸಾಕ್ಷಿದಾರರ ಹೇಳಿಕೆ ಜತೆಗೆ ಸಾಂಧರ್ಬಿಕ ಸಾಕ್ಷ್ಯಾಧಾರಗಳನ್ನು ಕೂಡ ಸಂಗ್ರಹಿಸಿದ್ದಾರೆ.

   Ramesh Jarkiholi Resigns, ರಾಸಲೀಲೆಯನ್ನ ಒಪ್ಪಿ ಜಾರಕಿಹೋಳಿ ರಾಜೀನಾಮೆ !! | Oneindia Kannada

   ಡಿವೈಎಸ್ಪಿ ಗೌತಮ್ ನೀಡಿದ ದೂರಿನ ಆಧಾರದ ಮೇಲೆ ಕಾಟನ್ ಪೇಟೆ ಪೊಲಿಸ್ ಠಾಣೆಯಲ್ಲಿ ದಾಖಲಾದ ದೂರಿನ ಮೇಲೆ ನಟಿ ಸಂಜನಾ, ರಾಗಿಣಿ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿತ್ತು. ಅವರ ಮನೆಗಳ ಶೋಧ ಬಳಿಕ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಡ್ರಗ್ ಪಾರ್ಟಿ ಆಯೋಜನೆ, ಸೇವನೆ ಕುರಿತು ವಾಟ್ಸಪ್‌ನಲ್ಲಿ ಸಂವಹನ ಮಾಡಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಟಿಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಸರಣಿ ಬಂಧನ ಮುಂದುವರೆದಿತ್ತು.

   English summary
   Sandalwood Drug Case: CCB Submits Investigation Report Against 25 People including Sanjjana and Ragini to Court. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X