Get Updates
Get notified of breaking news, exclusive insights, and must-see stories!

ಸ್ಯಾಂಡಲ್ ವುಡ್ ಡ್ರಗ್ ಕೇಸ್ : ನಟಿ ರಾಗಿಣಿ ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿಸೆಂಬರ್ 24: ಡ್ರಗ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಕಾರಣ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಹಾಗೂ ಹೊಟ್ಟೆನೋವು ಸಮಸ್ಯೆಯಿಂದ ಬಳಲುತ್ತಿದ್ದ ರಾಗಿಣಿ ಜೈಲು ಆರೋಗ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರಾಗಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು. ಡ್ರಗ್ ಜಾಲ ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಪ್ರಕಾಶ್ ಮತ್ತು ಇತರರು ಬಂಧನವಾಗದ ಹಿನ್ನೆಲೆಯಲ್ಲಿ ಜಾಮೀನು ನೀಡಿರಲಿಲ್ಲ. ಜಾಮೀನು ಕೋರಿ ರಾಗಿಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ನಟಿ ಸಂಜನಾ, ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲರಾದ ಅಜ್ಮತ್ ಪಾಷಾ ಅವರು ವಾದ ಮಂಡಿಸಿದ್ದರು. ಸಂಜನಾ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಷರತ್ತು ಬದ್ಧ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿತ್ತು. ಇದೀಗ ನಟಿ ರಾಗಿಣಿ ಅನಾರೋಗ್ಯಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Sandalwood Drug Case: Ragini Dwivedi Shifted to Private Hospital After She Suffering from Health Issues

ಬುಧವಾರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ನಟಿ ರಾಗಿಣಿ ತನ್ನ ಪೋಷಕರ ಬಳಿ ನೋವು ತೋಡಿಕೊಂಡಿದ್ದರು. ಉಸಿರಾಟದ ತೊಂದರೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ರಾಗಿಣಿ ಅವರನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಜೈಲು ಆಸ್ಪತ್ರೆ ವೈದ್ಯಾಧಿಕಾರಿಗಳು ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಜೈಲು ವಾಹನದಲ್ಲಿಯೇ ರಾಗಿಣಿ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ರಾಗಿಣಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನ್ನು ಜೈಲು ಅಧಿಕಾರಿಗಳೇ ಖಚಿತಪಡಿಸಿದ್ದಾರೆ.

Sandalwood Drug Case: Ragini Dwivedi Shifted to Private Hospital After She Suffering from Health Issues

ನಟಿ ರಾಗಿಣಿ ಆರೋಗ್ಯದಲ್ಲಿ ಏರು ಪೇರು ಆಗಿರುವ ಹಿನ್ನೆಲೆಯಲ್ಲಿ ಅನಾರೋಗ್ಯ ಕಾರಣದಿಂದ ಜಾಮೀನು ಕೋರಿ ಪುನಃ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿ ರಾಗಣಿ ಮೂರು ತಿಂಗಳೇ ಪೂರ್ಣ ಗೊಂಡಿವೆ. ಇಷ್ಟು ದಿನವಾದರೂ ಡ್ರಗ್ ಜಾಲ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಮುಖ ಆರೋಪಿಗಳು ಬಂಧನವಾಗದ ಹೊರತು ಪ್ರಕರಣದ ತನಿಖೆ ಸಾಧ್ಯವಿಲ್ಲ. ಪ್ರಕರಣದ ತನಿಖೆ ಮುಗಿಯದ ವರೆಗೂ ರಾಗಿಣಿಗೆ ಜಾಮೀನು ಸಿಗುವುದು ಅನುಮಾನ. ಹೀಗೆ ಅಡ್ಡ ಕತ್ತರಿಯಲ್ಲಿ ಸಿಕ್ಕಿ ಬಿದ್ದಿರುವ ರಾಗಿಣಿ ಆರೋಗ್ಯದಲ್ಲಿ ಏರು ಪೇರು ಕಾಣಿಸಿಕೊಂಡಿದೆ. ಜೈಲಿನ ಕ್ಯಾರೆಂಟೈನ್ ಸೆಲ್‌ ನಲ್ಲಿ ತಂಗಿರುವ ನಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ವೈದ್ಯರು ನೀಡುವ ವರದಿ ಆಧರಿಸಿ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+