• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ಪೊಲೀಸರ ವಶಕ್ಕೆ

|

ಬೆಂಗಳೂರು, ಸೆಪ್ಟೆಂಬರ್ 07 : ನಟಿ ರಾಗಿಣಿ ದ್ವಿವೇದಿಯನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರದಲ್ಲಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಯನ್ನು ಶುಕ್ರವಾರ ಸಂಜೆ ಬಂಧಿಸಿದ್ದರು.

   ಇನ್ನೂ 5 ದಿನಗಳ ಕಾಲ Raginiಗೆ ಪೊಲೀಸ್ ಸ್ಟೇಷನ್ನೇ ಗತಿ | Oneindia Kannada

   ಮೂರು ದಿನಗಳ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೋಮವಾರ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.

   ರಾಗಿಣಿ ದ್ವಿವೇದಿ ಆರೋಪಿ ನಂ.2, ರವಿಶಂಕರ್ ಹೆಸರು ನಾಪತ್ತೆ?

   ನ್ಯಾಯಾಧೀಶ ಜಗದೀಶ್ ಅವರು ಸಿಸಿಬಿ ಪೊಲೀಸರ ಮನವಿಯನ್ನು ಪುರಸ್ಕರಿಸಿದರು. 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ನಟಿ ರಾಗಿಣಿಗೆ ಇಂದು ಜಾಮೀನು ಸಿಗಲಿದೆ ಎಂಬ ನಿರೀಕ್ಷೆ ಕುಟುಂಬ ಸದಸ್ಯರಲ್ಲಿ ಇತ್ತು.

   ನಟಿ ರಾಗಿಣಿ ಆಪ್ತ ಬಿ. ಕೆ. ರವಿಶಂಕರ್ ಅಮಾನತು

   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದಾರೆ. ಅನಿರುದ್ಧ್ ಎಂಬ ಯುವಕ ಪ್ರಕರಣದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಭಾನುವಾರ ಸಿಸಿಬಿ ಪೊಲೀಸರ ಮುಂದೆ ಬಂದು ಶರಣಾಗಿದ್ದ.

   ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ದ್ವಿವೇದಿ ಬಂಧನ

   ವಿಚಾರಣೆಗೆ ಸಹಕಾರ ನೀಡುತ್ತಿಲ್ಲ

   ವಿಚಾರಣೆಗೆ ಸಹಕಾರ ನೀಡುತ್ತಿಲ್ಲ

   ನಟಿ ರಾಗಿಣಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಇನ್ನಷ್ಟು ವಿಚಾರಣೆ ಬಾಕಿ ಇದೆ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆದ್ದರಿಂದ, 1ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರಾದ ಜಗದೀಶ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದರು.

   3 ಗಂಟೆ ಮಾತ್ರ ವಿಚಾರಣೆ

   3 ಗಂಟೆ ಮಾತ್ರ ವಿಚಾರಣೆ

   ಸಿಸಿಬಿ ಪೊಲೀಸರು 10 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಕೇಳಿತ್ತು. ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿ ಭಾನುವಾರ ಅನಾರೋಗ್ಯದ ಕಾರಣ ವಿಚಾರಣೆಗೆ ಸಹಕಾರ ನೀಡಿರಲಿಲ್ಲ. ಪೊಲೀಸರು ಕೇವಲ 3 ಗಂಟೆ ಮಾತ್ರ ವಿಚಾರಣೆ ನಡೆಸಿದ್ದರು.

   ಸಾಕ್ಷ್ಯ ನಾಶ ಮಾಡುವ ಸಾಧ್ಯತೆ

   ಸಾಕ್ಷ್ಯ ನಾಶ ಮಾಡುವ ಸಾಧ್ಯತೆ

   ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಜಾಮೀನು ನೀಡಿದರೆ ಪ್ರಭಾವಿಯಾಗಿರುವ ಆರೋಪಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಎಂದು ಸಿಸಿಬಿ ಪರ ವಕೀಲರು ವಾದಿಸಿದರು. 10 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ಐದು ದಿನಗಳ ಕಾಲ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತು. ವಂತೆ ಪೊಲೀಸರು ಮನವಿ ಮಾಡಿದ್ದರು.

   ವಿಚಾರಣೆ ಬಳಿಕ ವಶಕ್ಕೆ

   ವಿಚಾರಣೆ ಬಳಿಕ ವಶಕ್ಕೆ

   ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಶುಕ್ರವಾರ ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ದಾಳಿ ಮಾಡಿದ್ದರು. ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಶುಕ್ರವಾರ ಸಂಜೆ ಬಂಧಿಸಿದ್ದರು.

   English summary
   1st ACMM court ordered that 5 days of CCB police custody for Kannada actress Ragini Dwivedi. CCB arrested actress allegedly for her involvement in drug running.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X