Get Updates
Get notified of breaking news, exclusive insights, and must-see stories!

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್ 04: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Recommended Video

      Sanjjanaa Galrani ಮಾಧ್ಯಮದವರ ಮೇಲೆ ಗರಂ ಆಗಿದ್ದೇಕೆ ?| Oneindia Kannada Kannada

      ಇಂದು ಬೆಳಗ್ಗೆ ರಾಗಿಣಿ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.ತಮ್ಮ ಆಪ್ತ ಗೆಳೆಯನ ಬಂಧನದ ಬೆನ್ನಲ್ಲೇ ರಾಗಿಣಿಗೆ ಬಂಧನ ಭೀತಿ ಎದುರಾಗಿದೆ.ಡ್ರಗ್ಸ್ ಪ್ರಕರಣ ಸಂಬಂಧ ರಾಗಿಣಿ ಸಿಸಿಬಿ ವಿಚಾರಣೆಗೆ ಗೈರಾಗಿದ್ದಾರೆ. ವೈಯಕ್ತಿಕ ಕಾರಣ ನೀಡಿ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್ ಮಾಡಿದ್ದರು.

      ಸರ್ಚ್ ವಾರೆಂಟ್ ಪಡೆದು ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ ಮೇಲೆ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

      Sandalwood Drug Mafia: CCB Raid On Actress Ragini Dwivedi House

      ಐದರಿಂದ ಆರು ಮಂದಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ರಾಗಿಣಿ ಮನೆಯಲ್ಲಿಯೇ ಇದ್ದು, ಸಿಸಿಬಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

      ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

      ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಚಲಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮನೆ ತಪಾಸಣೆ ಮಾಡುತ್ತಿದ್ದಾರೆ. ಇದೀಗ ನಟಿ ರಾಗಿಣಿ ಬಂಧನದ ಭೀತಿಯಲ್ಲಿದ್ದಾರೆ.

      ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+