ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಸೆಪ್ಟೆಂಬರ್ 08: ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ಮಂಗಳವಾರ ಬೆಳಗ್ಗೆ 8ಕ್ಕೂ ಅಧಿಕ ಸಿಸಿಬಿ ಅಧಿಕಾರಿಗಳು ಇಂದಿರಾ ನಗರದಲ್ಲಿರುವ ಬಹುಭಾಷಾ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ನಟಿ ಸಂಜನಾ ಆಪ್ತರಾದ ರಾಹುಲ್ ಎಂಬಾತನನ್ನು ಇದೇ ಪ್ರಕರಣದಲ್ಲಿ ಸಿಸಿಬಿ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ಸಂಜನಾ ಆಪ್ತರಾದ ರಾಹುಲ್ ಹೇಳಿಕೆ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನಟಿ ರಾಗಿಣಿ ದ್ವಿವೇದಿ ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಐದು ದಿನಗಳ ಕಾಲ ಅವರನ್ನು ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ರಾಹುಲ್ ನೀಡಿದ ಮಾಹಿತಿ ಆಧರಿಸಿ ಸಂಜನಾ ಗಲ್ರಾನಿ ಆಪ್ತೆ ಪೃಥ್ವಿ ಶೆಟ್ಟಿಯನ್ನು ಸಿಸಿಬಿ ವಿಚಾರಣೆ ನಡೆಸಿತ್ತು. ಈಗ ಸಂಜನಾ ಮನೆ ಮೇಲೆ ದಾಳಿ ಮಾಡಲಾಗಿದೆ. ಸಂಜನಾ ಇಂದಿರಾ ನಗರದ ನಿವಾಸದಲ್ಲಿಯೇ ಇದ್ದಾರೆ. ಸಿಸಿಬಿ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆ ಮುಂದುವರೆಸಿದೆ.
ಸಿಸಿಬಿ ಪುನೀತ್, ಅಂಜುಮಾಲಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಆರು ಸಿಬ್ಭಂದಿ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರನ್ನು ಹೊರಗೆ ಭದ್ರತೆಗೆ ನಿಯೋಜನೆ ಮಾಡಲಾಗಿದೆ.












Click it and Unblock the Notifications