ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೂ ಮೂರು ದಿನ ನಟಿ ರಾಗಿಣಿ ದ್ವಿವೇದಿಗೆ ಜೈಲುವಾಸ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಸೆ. 19ಕ್ಕೆ ಮುಂದೂಡಿದೆ. ರಾಗಿಣಿ ದ್ವಿವೇದಿ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಬಂಧಿಸಿದ್ದರು. ಸೆ. 14ರಂದು ಅವರನ್ನು 1ನೇ ಎಸಿಎಂಎಂ ನ್ಯಾಯಾಲಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಡ್ರಗ್ ಕೇಸ್; ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಭಾಗ್ಯವಿಲ್ಲ ಡ್ರಗ್ ಕೇಸ್; ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಭಾಗ್ಯವಿಲ್ಲ

Sandalwood Drug Racket: Actress Ragini Dwivedi Bail Plea Adjourned Till September 19

ಬೆಂಗಳೂರಿನ ವಿಶೇಷ ಎನ್‌ಡಿಪಿಎಸ್ ಕೋರ್ಟ್‌ಗೆ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಹಾಕಿದ್ದಾರೆ. ಬುಧವಾರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಾಲಯ ಸೆ.19ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ

2ನೇ ಬಾರಿಗೆ ಮುಂದೂಡಿಕೆ : ವಿಶೇಷ ಎನ್‌ಡಿಪಿಎಸ್ ಕೋರ್ಟ್‌ 2ನೇ ಬಾರಿಗೆ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡುತ್ತಿದೆ. ಸೆ. 14ರಂದು ಅರ್ಜಿ ವಿಚಾರಣೆ ನಡದಾಗ ಸೆ. 16ಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಈಗ ಸೆ. 19ಕ್ಕೆ ಮುಂದೂಡಲಾಗಿದೆ.

ಡ್ರಗ್ಸ್ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತೆ, ನಿಯಮಗಳೇನು? ಡ್ರಗ್ಸ್ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತೆ, ನಿಯಮಗಳೇನು?

ಸೆಪ್ಟೆಂಬರ್ 14ರಂದು 1ನೇ ಎಸಿಎಂಎಂ ಕೋರ್ಟ್‌ನಲ್ಲಿ ರಾಗಿಣಿಗೆ ಬೆನ್ನುನೋವು ಇರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದರು, ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚನೆ ನೀಡಿತ್ತು.

English summary
A special Narcotics Drugs and Psychotropic Substances (NDPS) court Bengaluru adjourned the bail application hearing of Kannada actress Ragini Dwivedi to September 19, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X