ಬಹುಭಾಷಾ ನಟಿ ಸಂಜನಾ ಗಲ್ರಾನಿಗೆ 2 ದಿನ ನ್ಯಾಯಾಂಗ ಬಂಧನ

ಬೆಂಗಳೂರು, ಸೆಪ್ಟೆಂಬರ್ 16: ಬಹುಭಾಷಾ ನಟಿ ಸಂಜನಾ ಗಲ್ರಾನಿಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಾಗಿಣಿ ದ್ವಿವೇದಿ ಬಳಿಕ ಸಂಜನಾ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಸಿಬಿ ಪೊಲೀಸರ ನ್ಯಾಯಾಲಯ ಮುಂದೆ ಹಾಜರುಪಡಿಸಿದರು. 1ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.

ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿ ನಿವಾಸದ ಮೇಲೆ ಸೆಪ್ಟೆಂಬರ್ 8ರಂದು ದಾಳಿ ನಡೆಸಿದ್ದರು. ಅಂದು ಸಂಜೆ ಅವರನ್ನು ಬಂಧಿಸಿ ಸಿಸಿಬಿ ವಶಕ್ಕೆ ಪಡೆಯಲಾಗಿತ್ತು.

ಸಂಜನಾ ಗಲ್ರಾನಿ ಅವರಿಗೆ ಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ವರದಿ ನಗೆಟಿವ್ ಬಂದಿತ್ತು. ಬುಧವಾರ ಸಹ ಮತ್ತೊಮ್ಮೆ ಅವರ ಆರೋಗ್ಯ ಪರೀಕ್ಷೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಸಂಜನಾ ಗಲ್ರಾನಿ ಜೈಲಿಗೆ

ಸಂಜನಾ ಗಲ್ರಾನಿ ಜೈಲಿಗೆ

ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಸಂಜನಾ ಗಲ್ರಾನಿ ಬೆಂಗಳೂರಿನ ವಿಶೇಷ ಎನ್‌ಡಿಪಿಎಸ್ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಬೇಕು. ಅರ್ಜಿ ವಿಚಾರಣೆ ನಡೆದು ಜಾಮೀನು ಸಿಗುವ ತನಕ ಪರಪ್ಪನ ಅಗ್ರಹಾರದಲ್ಲಿರಬೇಕು. 1ನೇ ಎಸಿಎಂಎಂ ಕೋರ್ಟ್‌ ಜಾಮೀನು ನಿರಾಕರಿಸಿದೆ.

ಮನೆ ಮೇಲೆ ದಾಳಿ ಮಾಡಿದ್ದ ಸಿಸಿಬಿ

ಮನೆ ಮೇಲೆ ದಾಳಿ ಮಾಡಿದ್ದ ಸಿಸಿಬಿ

ಸಂಜನಾ ಗಲ್ರಾನಿ ಆಪ್ತ ರಾಹುಲ್ ಬಂಧಿಸಿದ್ದ ಸಿಸಿಬಿ ಪೊಲೀಸರು ಆತ ನೀಡಿದ ಮಾಹಿತಿಯಂತೆ ಸಂಜನಾ ಮನೆ ಮೇಲೆ ಸೆ.8ರಂದು ದಾಳಿ ಮಾಡಿದ್ದರು. ಬಳಿಕ ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿದ್ದರು. ಬಳಿಕ ಅಂದೇ ಅವರನ್ನು ಬಂಧಿಸಿ ಸಿಸಿಬಿ ಪೊಲೀಸರ ವಶಕ್ಕೆ ಪಡೆಯಲಾಗಿತ್ತು.

ಮತ್ತೆ ವಶಕ್ಕೆ ಪಡೆದಿದ್ದ ಸಿಸಿಬಿ

ಮತ್ತೆ ವಶಕ್ಕೆ ಪಡೆದಿದ್ದ ಸಿಸಿಬಿ

ಸೆ. 14ರಂದು ರಾಗಿಣಿ ಮತ್ತು ಸಂಜನಾರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆಗ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಪುನಃ ಮನವಿ ಸಲ್ಲಿಸಿ ಸಂಜನಾ ಗಲ್ರಾನಿಯನ್ನು 3 ದಿನಗಳ ಕಾಲ ವಶಕ್ಕೆ ಪಡೆದಿದ್ದರು.

ಸಿಸಿಬಿ ವಶಕ್ಕೆ ಕೇಳಲಿಲ್ಲ

ಸಿಸಿಬಿ ವಶಕ್ಕೆ ಕೇಳಲಿಲ್ಲ

ಬುಧವಾರ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಶಕ್ಕೆ ಕೇಳಲಿಲ್ಲ. ಸಂಜನಾ ಜೊತೆ ಇಂದು ನ್ಯಾಯಾಲಯದ ಮುಂದೆ ವಿರೇನ್ ಖನ್ನಾ, ರವಿಶಂಕರ್‌ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+