ಡ್ರಗ್ ಕೇಸ್; ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಭಾಗ್ಯವಿಲ್ಲ

ಬೆಂಗಳೂರು, ಸೆಪ್ಟೆಂಬರ್ 14 : ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಸೆ. 16ಕ್ಕೆ ಮುಂದೂಡಿದೆ. ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಬಂಧಿಸಿದ್ದಾರೆ.

ಬೆಂಗಳೂರಿನ ವಿಶೇಷ ಎನ್‌ಡಿಪಿಎಸ್ ಕೋರ್ಟ್‌ನಲ್ಲಿ ಸೋಮವಾರ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಾಲಯ ಸೆ.16ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು. ನಟಿ ರಾಗಿಣಿ ಪ್ರಸ್ತುತ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ.

ಎನ್‌ಡಿಪಿಎಸ್ ನ್ಯಾಯಾಲಯದಲ್ಲಿ ಇದೇ ಪ್ರಕರಣದಲ್ಲಿ ಆರೋಪಿಗಳಾದ ವೈಭವ್ ಜೈನ್ ಮತ್ತು ರಾಹುಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವೈಭವ್ ಜೈನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ರಾಹುಲ್ ಅರ್ಜಿಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು.

ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿ ಮತ್ತು ಸಂಜನಾ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯಗೊಳ್ಳಲಿದೆ. ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಸಿಸಿಬಿ ವಶದಲ್ಲಿ ರಾಗಿಣಿ ದ್ವಿವೇದಿ

ಸಿಸಿಬಿ ವಶದಲ್ಲಿ ರಾಗಿಣಿ ದ್ವಿವೇದಿ

ಸಿಸಿಬಿ ಪೊಲೀಸರು ಆಗಸ್ಟ್ 4ರ ಶುಕ್ರವಾರ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು ಸಿಸಿಬಿ ಕಚೇರಿಗೆ ಕರೆ ತಂದಿದ್ದರು. ಅಂದು ಸಂಜೆ ಅವರನ್ನು ಬಂಧಿಸಲಾಗಿತ್ತು. ಈಗಲೂ ಸಹ ಅವರು ಪೊಲೀಸರ ವಶದಲ್ಲಿದ್ದಾರೆ. ಇಂದಿಗೆ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ.

ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ

ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ

ಸಿಸಿಬಿ ಪೊಲೀಸರು ಸೋಮವಾರ ರಾಗಿಣಿ ಅವರನ್ನು ಪುನಃ ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ ಇದೆ. ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ನ್ಯಾಯಾಲಯ ರಾಗಿಣಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ಪರಪ್ಪನ ಅಗ್ರಹಾರ ಜೈಲು ಸೇರಬೇಕಾಗುತ್ತದೆ.

ವೈದ್ಯಕೀಯ ಪರೀಕ್ಷೆ ಮುಕ್ತಾಯ

ವೈದ್ಯಕೀಯ ಪರೀಕ್ಷೆ ಮುಕ್ತಾಯ

ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ ವೈದ್ಯಕೀ ಪರೀಕ್ಷೆಯನ್ನು ನಡೆಸಿದ್ದಾರೆ. ಒಂದು ವಾರಕ್ಕೂ ಹೆಚ್ಚು ಕಾಲ ವಿಚಾರಣೆ ಮಾಡಿದ್ದಾರೆ. ಆದ್ದರಿಂದ, ಸೋಮವಾರ ಪುನಃ ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ ಇದೆ. ಜಾಮೀನು ಸಿಗುವ ತನಕ ರಾಗಿಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

Recommended Video

    Ragini ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್ | Oneindia Kannada
    ಸಂಜನಾ ಜಾಮೀನು ಅರ್ಜಿ ಸಲ್ಲಿಸಿಲ್ಲ

    ಸಂಜನಾ ಜಾಮೀನು ಅರ್ಜಿ ಸಲ್ಲಿಸಿಲ್ಲ

    ಸಿಸಿಬಿ ಪೊಲೀಸರು ನಟಿ ಸಂಜನಾ ಗಲ್ರಾನಿಯನ್ನು ಇದೇ ಪ್ರಕರಣದಲ್ಲಿ ಬಂಧಿಸಿದ್ದಾರೆ. ಆದರೆ, ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿಲ್ಲ. ಅವರ ಪೊಲೀಸ್ ಕಸ್ಟಡಿ ಸಹ ಸೋಮವಾರ ಅಂತ್ಯಗೊಳ್ಳಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+