• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡ್ರಗ್ ಪ್ರಕರಣ; ಆದಿತ್ಯ ಆಳ್ವಾ ಮನೆ ಮೇಲೆ ಸಿಸಿಬಿ ದಾಳಿ

|

ಬೆಂಗಳೂರು, ಸೆಪ್ಟೆಂಬರ್ 15 : ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆದಿತ್ಯ ಆಳ್ವಾ ನಿವಾಸ ಮೇಲೆ ದಾಳಿ ಮಾಡಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆದಿತ್ಯ ಆಳ್ವಾ 6ನೇ ಆರೋಪಿ.

ಮಂಗಳವಾರ ಬೆಳಗ್ಗೆ ಸಿಸಿಬಿ ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ಪೊಲೀಸರ ತಂಡ ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವಾ ನಿವಾಸದ ಮೇಲೆ ದಾಳಿ ಮಾಡಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಸೆಪ್ಟೆಂಬರ್ 4ರಿಂದ ನಾಪತ್ತೆಯಾಗಿದ್ದಾರೆ.

ನಟಿ ಸಂಜನಾ ಗಲ್ರಾನಿ ಮತ್ತೆ 3 ದಿನ ಸಿಸಿಬಿ ಪೊಲೀಸ್ ವಶಕ್ಕೆ

ಆದಿತ್ಯ ಆಳ್ವಾ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ. ಪಾರ್ಟಿಗಳಿಗೆ ರೆಸಾರ್ಟ್‌ಗಳನ್ನು ಬಾಡಿಗೆಗೆ ಕೊಡುತ್ತಿದ್ದರು ಎಂಬ ಮಾಹಿತಿ ಇದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ರಾಗಿಣಿ ದ್ವಿವೇದಿ ಆರೋಪಿ ನಂ.2, ರವಿಶಂಕರ್ ಹೆಸರು ನಾಪತ್ತೆ?

ಆದಿತ್ಯ ಆಳ್ವಾ 'ಹೌಸ್ ಆಫ್ ಲೈಫ್' ಎಂಬ ರೆಸಾರ್ಟ್ ಹೊಂದಿದ್ದಾರೆ. ಹೆಬ್ಬಾಳ ಕೆರೆಗೆ ಹೊಂದಿಕೊಂಡಂತೆ ಇರುವ 6 ಎಕರೆ ರೆಸಾರ್ಟ್‌ನಲ್ಲಿ ವೀಕೆಂಡ್ ಪಾರ್ಟಿಗಳು ನಡೆಯುತ್ತಿದ್ದವು. ಈ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆಯಾಗುತ್ತಿತ್ತು ಎಂಬುದು ಆರೋಪವಾಗಿದೆ.

ಡ್ರಗ್ ಕೇಸ್; ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಭಾಗ್ಯವಿಲ್ಲ

   Hindi Diwas ವಿಚಾರವಾಗಿ ಗರಂ ಆದ್ರು Dinesh Gundurao | Oneindia Kannada

   ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ 'ಹೌಸ್ ಆಫ್ ಲೈಫ್'ನಲ್ಲಿ ನಡೆಯುತ್ತಿದ್ದ ಪಾರ್ಟಿಗಳ ಬಗ್ಗೆ ಮಾಹಿತಿ ನೀಡಿದ್ದ. ಮಾಜಿ ಸಚಿವ ಜೀವರಾಜ್ ಆಳ್ವಾ ಹಾಗೂ ಖ್ಯಾತ ನೃತ್ಯಗಾರ್ತಿ ನಂದಿನಿ ಆಳ್ವಾ ಪುತ್ರ ಆದಿತ್ಯ ಆಳ್ವಾ. ಬಾಲಿವುಡ್ ನಟ ವಿವೇಕ್ ಒಬೇರಾಯ್ ಬಾಮೈದ.

   English summary
   CCB police who probing sandalwood drug scandal conducting search at Aditya Alva's house near Hebbal, Bengaluru. Aditya Alva is one of the accused in the FIR.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X