ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಮೀನು ಪಡೆಯಲು ಹೈಕೋರ್ಟ್ ಮೊರೆ ಹೋದ ಸಂಜನಾ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 09: ಬಹುಭಾಷಾ ನಟಿ ಸಂಜನಾ ಗಲ್ರಾನಿ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೆಪ್ಟೆಂಬರ್ 16ರಿಂದ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನಲ್ಲಿದ್ದಾರೆ.

ಶುಕ್ರವಾರ ನಟಿ ಸಂಜನಾ ಗಲ್ರಾನಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ನ್ಯಾಯಾಲಯ ಎಂದು ಅರ್ಜಿಯ ವಿಚಾರಣೆ ನಡೆಸಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ನಟಿಯರಿಗೆ ಸಂಕಷ್ಟ; ರಾಗಿಣಿ, ಸಂಜನಾ 5 ದಿನ ಇಡಿ ಕಸ್ಟಡಿಗೆ ನಟಿಯರಿಗೆ ಸಂಕಷ್ಟ; ರಾಗಿಣಿ, ಸಂಜನಾ 5 ದಿನ ಇಡಿ ಕಸ್ಟಡಿಗೆ

ಸೆಪ್ಟೆಂಬರ್ 28ರಂದು ಬೆಂಗಳೂರಿನ ವಿಶೇಷ ಎನ್‌ಟಿಪಿಎಸ್ ಕೋರ್ಟ್ ನಟಿ ಸಂಜನಾ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ, ಸಂಜನಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು? ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು?

ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಬಂಧಿಸಿದ್ದರು. ವಿಚಾರಣೆ ಬಳಿಕ ಸೆಪ್ಟೆಂಬರ್ 16ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತ್ತು. ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ನಟಿ ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ವಶಕ್ಕೆ ನಟಿ ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ವಶಕ್ಕೆ

ಸೆಪ್ಟೆಂಬರ್ 8ರಂದು ಬಂಧನ

ಸೆಪ್ಟೆಂಬರ್ 8ರಂದು ಬಂಧನ

ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಟಿ ಸಂಜನಾ ಮನೆ ಮೇಲೆ ಸೆಪ್ಟೆಂಬರ್ 8ರಂದು ದಾಳಿ ಮಾಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕರೆತರಲಾಗಿತ್ತು. ಅಂದು ಸಂಜೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಬಂಧಿಸಿದ್ದರು.

ನ್ಯಾಯಾಂಗ ಬಂಧನಕ್ಕೆ

ನ್ಯಾಯಾಂಗ ಬಂಧನಕ್ಕೆ

8 ದಿನಗಳ ಕಾಲ ಸಿಸಿಬಿ ಪೊಲೀಸರು ಸಂಜನಾ ವಿಚಾರಣೆ ನಡೆಸಿದ್ದರು. ಸೆಪ್ಟೆಂಬರ್ 16ರಂದು ಎನ್‌ಡಿಪಿಎಸ್ ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಪೊಲೀಸರು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದರು. ಅಂದಿನಿಂದ ಅವರು ಜೈಲಿನಲ್ಲಿಯೇ ಇದ್ದಾರೆ.

ವಿಚಾರಣೆ ನಡೆಸಿದ ಇಡಿ

ವಿಚಾರಣೆ ನಡೆಸಿದ ಇಡಿ

ಸಿಸಿಬಿ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಬಂಧಿಸಿದ್ದಾರೆ. ಬಳಿಕ ಜಾರಿ ನಿರ್ದೇಶನಾಲಯ ಐದು ದಿನಗಳ ಕಾಲ ಅವರನ್ನು ವಶಕ್ಕೆ ಪಡೆದು ಜೈಲಿನಲ್ಲಿಯೇ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ, ಹೂಡಿಕೆ ಮತ್ತು ಆಸ್ತಿಗಳ ಖರೀದಿ ಕುರಿತು ಇಡಿ ತನಿಖೆ ನಡೆಯುತ್ತಿದೆ.

Recommended Video

RR Nagar ByElection : ಕುಮಾರಣ್ಣ ಸ್ಪಷ್ಟವಾಗಿ ಹೇಳಿದರು | Oneindia Kannada
ಜಾಮೀನು ಅರ್ಜಿ ವಜಾ

ಜಾಮೀನು ಅರ್ಜಿ ವಜಾ

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ಮತ್ತು ಸಂಜನಾ ಎನ್‌ಡಿಪಿಎಸ್‌ ಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆಪ್ಟೆಂಬರ್ 28ರಂದು ಅರ್ಜಿಯನ್ನು ವಜಾಗೊಳಿಸಿತ್ತು.

English summary
Sanjana Galrani has moved the Karnataka high court seeking bail in connection with the drug case. A special Narcotics Drugs and Psychotropic Substances (NDPS) court rejected the bail application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X