ಸಂತೋಷ ಪ್ರಕರಣ: ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಎಎಪಿ ಪ್ರತಿಭಟನೆ
ಬೆಂಗಳೂರು, ಏ.13: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಬಂಧನಕ್ಕೆ ಒತ್ತಾಯ ಹೆಚ್ಚಾಗುತ್ತಿದೆ. ನಿನ್ನೆಯಿಂದಲೂ ಕೆಲವು ಪಕ್ಷದ ಕಾರ್ಯಕರ್ಯರು ಪ್ರತಿಭಟನೆ ನಡೆಸಿದ್ದಾರೆ. ಇಂದೂ ಕೂಡ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಬೆಂಗಳೂರಿನ ಶಿವಾನಂದ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಿದರು.
ಈ ವೇಳೆ ಸಚಿವ ಈಶ್ವರಪ್ಪ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗಿದೆ. ಜೊತೆಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಾಗುತ್ತಿದ್ದ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ಬಂಧಿಸಿದರು. ಬಂಧಿತರನ್ನು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, "ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ತೋರಿದ್ದ ಸಂತೋಷ್ ಪಾಟೀಲ್‌ರವರಿಗೆ ನ್ಯಾಯ ಸಿಗಬೇಕೆಂದರೆ ಶೀಘ್ರವೇ ಈಶ್ವರಪ್ಪನವರ ಬಂಧನವಾಗಬೇಕು. ರಾಜ್ಯ ಸಚಿವ ಸಂಪುಟದಲ್ಲಿ ಈಶ್ವರಪ್ಪನವರು ಪ್ರಭಾವಿ ಸಚಿವರಾಗಿದ್ದು, ಈ ಕೂಡಲೇ ಅವರನ್ನು ಬಂಧಿಸದಿದ್ದರೆ ಸಾಕ್ಷ್ಯಾಧಾರಗಳನ್ನು ನಾಶ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಆರೋಪಿ ಈಶ್ವರಪ್ಪನವರನ್ನು ಬಂಧಿಸುವ ಬದಲು ಆಮ್ ಆದ್ಮಿ ಪಾರ್ಟಿ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ ನಡೆ ಖಂಡನೀಯ" ಎಂದು ಹೇಳಿದರು.

"ಈಶ್ವರಪ್ಪನವರೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದರೂ ಈಶ್ವರಪ್ಪನವರ ಬಂಧನವಾಗಿಲ್ಲ. ಸಚಿವರನ್ನು ಬಂಧಿಸದಿದ್ದರೆ ಜನಸಾಮಾನ್ಯರಿಗೇ ಒಂದು ಕಾನೂನು, ಸಚಿವರಿಗೆ ಮತ್ತೊಂದು ಕಾನೂನು ಇದೆ ಎಂಬ ತಪ್ಪು ಸಂದೇಶ ಸಮಾಜಕ್ಕೆ ಹೋಗಲಿದೆ. ಸಚಿವ ಸಂಪುಟದಿಂದ ಈಶ್ವರಪ್ಪನವರನ್ನು ಹೊರಹಾಕಿ, ಅವರನ್ನು ಬಂಧಿಸಿದಿದ್ದರೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ" ಎಂದು ಮೋಹನ್ ದಾಸರಿ ಹೇಳಿದರು.
ಆಮ್ ಆದ್ಮಿ ಪಾರ್ಟಿ ನಾಯಕರಾದ ಜಗದೀಶ್ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಕುಶಲಸ್ವಾಮಿ, ಉಷಾ ಮೋಹನ್, ಪ್ರಕಾಶ್ ನೆಡುಂಗಡಿ, ಸೀತಾರಾಮ್, ನಂಜಪ್ಪ ಕಾಳೇಗೌಡ, ಗೋಪಿನಾಥ್, ಕುದ್ರತ್, ಜಗದೀಶ್ ಬಾಬು, ಅಬ್ಬಾಸ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಆಗಿದ್ದೇನು?
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ. ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ. ನನ್ನ ಜೊತೆ ಬಂದಿರುವ ಇಬ್ಬರು ಸ್ನೇಹಿತರು ನನ್ನ ಸಾವಿಗೆ ಕಾರಣವಲ್ಲ, ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ. ಸಚಿವರ ವಿರುದ್ಧ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಎಂದು ಮೆಸೇಜ್ನಲ್ಲಿ ಉಲ್ಲೇಖಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಂತೋಷ್ ಪಾಟೀಲ್ ಮನೆಯಿಂದ ಕಾಣೆಯಾಗಿದ್ದರು. ಗೆಳೆಯರನ್ನು ಪ್ರವಾಸ ಹೋಗೋಣ ಎಂದು ಕರೆದುಕೊಂಡು ಬಂದಿದ್ದೇನೆ, ನನ್ನ ಸಾವಿಗೂ ಗೆಳಯರಿಗೂ ಸಂಬಂಧವಿಲ್ಲ. ಸಚಿವ ಈಶ್ವರಪ್ಪನವರೇ ನೇರ ಕಾರಣ ಎಂದು ಮಾಧ್ಯಮಗಳಿಗೆ ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಿ. ಬಡಸ ಗ್ರಾಮ ಬಿಟ್ಟು ಬೆಳಗಾವಿ ನಗರಕ್ಕೆ ಬಂದು ನೆಲೆಸಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಅವರಿಗೆ ಒಂದೂವರೆ ವರ್ಷದ ಮಗು ಇದೆ.
Recommended Video
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications