ಸಂತೋಷ್‌ ಆತ್ಮಹತ್ಯೆ: 'ಸಾಕ್ಷಿ ನಾಶಕ್ಕೂ ಮುನ್ನ ಈಶ್ವರಪ್ಪನನ್ನು ಬಂಧಿಸಿ' ಎಎಪಿ ದೂರು

ಬೆಂಗಳೂರು ಏಪ್ರಿಲ್ 12: ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಶರಣಾಗಿದ್ದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲವನ್ನೇ ಸೃಷ್ಟಿ ಮಾಡಿದೆ. ಸಂತೋಷ್‌ ಪಾಟೀಲ್‌ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಕಾರಣವೆಂದು ಬರೆದಿರುವುದು ಕಂಡುಬಂದಿದೆ. ಹೀಗಾಗಿ ಸಾಕ್ಷಿ ನಾಶ ತಡೆಯಲು ಈಶ್ವರಪ್ಪ ಅವರನ್ನು ಶೀಘ್ರವೇ ಬಂಧನ ಮಾಡಬೇಕು ಎಂದು ಒತ್ತಾಯಿಸಿ ಆಮ್‌ ಆದ್ಮಿ ಪಾರ್ಟಿ ನಾಯಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಬಳಿಕ ಈಶ್ವರಪ್ಪ ಅಧಿಕಾರದಿಂದ ಕೆಳಗಿಳುವಂತೆ ಹಾಗೂ ಅವರ ವಿರುದ್ಧ ಕ್ರಮಕ್ಕೆ ಒತ್ತಡಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ದಾಖಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ''ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಸಂತೋಷ್‌ ಪಾಟೀಲ್‌ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಈಶ್ವರಪ್ಪನವರನ್ನು ಬಂಧಿಸಬೇಕು. ಇಲ್ಲದಿದ್ದರೆ ಅವರು ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಸಚಿವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿದಾಗ ಮಾತ್ರ ಪ್ರಕರಣದ ಆಳ-ಅಗಲ ತಿಳಿಯಲಿದೆ'' ಎಂದು ಹೇಳಿದರು.

''ಗುತ್ತಿಗೆದಾರರಾಗಿದ್ದ ಸಂತೋಷ್‌ರವರು ಈಶ್ವರಪ್ಪ ವಿರುದ್ಧ 40% ಮಾಡಿ ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ನಾವಿಂದು ಸಂತೋಷ್‌ರವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ ನಡೆಯಲಿಲ್ಲ. ಭ್ರಷ್ಟ ಬಿಜೆಪಿಯ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ''ಎಂದು ಮೋಹನ್‌ ದಾಸರಿ ಹೇಳಿದರು. ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಜಗದೀಶ್‌ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಉಷಾ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.

Santosh Patil suicide: AAP complaint against KS Eshwarappa

ಇತ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಅವರ ಬೆಂಗಳೂರು ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಿನ್ನೆಲೆಯಲ್ಲಿ ಗಾಂಧಿಭವನ ರಸ್ತೆಯಲ್ಲಿರುವ ಕೆ.ಎಸ್. ಈಶ್ವರಪ್ಪ ಅವರ ಮನೆ ಬಳಿ ಬಿಗಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಎಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈಶ್ವರಪ್ಪ ಅವರ ಶಿವಮೊಗ್ಗ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ಬೆಂಗಳೂರು ಸರ್ಕಾರಿ ನಿವಾಸದ ಮುಂದೆ ಸಹ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

Santosh Patil suicide: AAP complaint against KS Eshwarappa

ಬೆಳಗಾವಿಯಲ್ಲಿ ಸುಮಾರು 108 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದ ಸಂತೋಷ್ ಪಾಟೀಲ್ ಅವರಿಗೆ ಬಿಲ್ ಪಾವತಿ ಮಾಡಿರಲಿಲ್ಲ. ವಿವಿಧೆಡೆ ಸಾಲ ಮಾಡಿ ಗುತ್ತಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಹಣ ಬಿಡುಗಡೆ ಮಾಡುವಂತೆ ಸಂತೋಷ್ ಪಾಟೀಲ್ ಮನವಿ ಮಾಡಿದ್ದರು. ಆದರೂ ಅಧಿಕಾರಿಗಳು ಸೊಪ್ಪು ಹಾಕಿರಲಿಲ್ಲ. ಇದರಿಂದ ನೊಂದಿದ್ದ ಸಂತೊಷ್ ಪಾಟೀಲ್ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ಕಚೇರಿಗೆ ದೂರು ಸಲ್ಲಿಸಿದ್ದರು. ಇದು ರಾಜ್ಯದಲ್ಲಿ ದೊಡ್ಡ ವಿವಾದ ಎಬ್ಬಿಸಿತ್ತು. ಇಷ್ಟಾಗಿಯೂ ಸಂತೋಷ್ ಪಾಟೀಲ್ ಗೆ ನ್ಯಾಯ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+