ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ಕೊಟ್ಟ ನಟಿ ಸರೋಜಾದೇವಿ

ಬೆಂಗಳೂರು, ಏಪ್ರಿಲ್ 2: ಹಿರಿಯ ನಟಿ ಬಿ.ಸರೋಜಾದೇವಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೈಗಾರಿಕೋದ್ಯಮಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಳಿಕೊಂಡಿದ್ದರು.

ಮುಖ್ಯಮಂತ್ರಿಗಳ ಕರೆಗೆ ಸ್ಪಂದಿಸಿರುವ ಹಿರಿಯ ಕಲಾವಿದೆ ಬಿ.ಸರೋಜಾದೇವಿ 5 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.

Saroja Devi Donates 5 Lakh Rupees To CM Relief Fund

ಈ ಹಿಂದೆ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್-19 ವಿರುದ್ಧ ಹೋರಾಡಲು 50 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದರು.

ಅಂದ್ಹಾಗೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ 121 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 10 ಮಂದಿ ಗುಣಮುಖರಾಗಿದ್ದು, 3 ಮಂದಿ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+