ಬೆಂಗಳೂರಲ್ಲಿ ಭಾನುವಾರ ಅಸಂಖ್ಯ ಪ್ರಥಮರ ಗಣಮೇಳ, ಸರ್ವಶರಣರ ಸಮ್ಮೇಳನ
ಬೆಂಗಳೂರು, ಫೆಬ್ರವರಿ 15: ಚಿತ್ರದುರ್ಗದ ಢಾ ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ನಡೆಯಲಿರುವ ಅಸಂಖ್ಯ ಪ್ರಥಮರ ಗಣಮೇಳ ಹಾಗೂ ಸರ್ವಶರಣವ ಸಮ್ಮೇಳದನ ಐತಿಹಾಸಿಕ ಸಮಾವೇಶವಾಗುವುದರಲ್ಲಿ ಅನುಮಾನವಿಲ್ಲ ಎಂದು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಹಾಗೂ ಅಂತರ್ ರಾಜ್ಯ ಜನನಾಯಕ ಕರ್ಪೂರಿ ಠಾಕೂರ್ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಬಿ.ಶಿವಕುಮಾರ್ ಹೇಳಿದ್ದಾರೆ.
ನಗರದ ಪ್ರೆಸ್ ಕ್ಲಬ್‌ನಲ್ಲಿಂದು ಅಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೌರಿಕ, ಹಡಪದ, ಭಂಡಾರಿ ಹೆಸರುಗಳಲ್ಲಿ ಕರೆಯಲ್ಪಡುತ್ತಿರುವ ಸವಿತಾ ಸಮಾಗದ ಜನರು ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಅಸಂಖ್ಯ ಪ್ರಥಮರ ಗಣಮೇಳದಲ್ಲಿ ಸಾವಿರಾರು ಜನಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂತರ್ ರಾಜ್ಯ ಜನನಾಯಕ ಕರ್ಪೂರಿ ಠಾಕೂರ್ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ನೂರಾರು ಮಂಗಳ ವಾದ್ಯಗಳೊಂದಿಗೆ ಗಣ ಮೇಳಕ್ಕೆ ಮಂಗಳ ಬಯುಸುವ ಸಾಂಸ್ಕೃತಿಕ ಮೆರವಣಿಗೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ನಂದಿಗ್ರೌಂಡ್ಸ್ ನಲ್ಲಿ ಜಮಾಯಿಸುತ್ತಿದ್ದೇವೆ.

ಅಂದು 12 ನೇ ಶತಮಾನದಲ್ಲಿ ಬಸವಾದಿ ಶರಣರು ಆಯೋಜಿಸಿದ್ದ ಪ್ರಥಮರ ಗಣಮೇಳದ ರೀತಿಯಲ್ಲಿ ಇಂದು ಬಸವಣ್ಣನವರ ರೂಪದಲ್ಲಿ ಸಾಮಾಜಿಕ ಪರಿವರ್ತನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಶಿವಮೂರ್ತಿ ಮುರುಘಾ ಶರಣರು 16 ನೇ ಫೆಬ್ರವರಿ ಭಾನುವಾರದಂದು ಆಯೋಜಿಸಿರುವ ಗಣಮೇಳವು ಐತಿಹಾಸಿಕ ಸಮಾವೇಶವಾಗುತ್ತದೆ ಎಂದು ಡಾ. ವೆಂಕಟಸ್ವಾಮಿ ಹೇಳಿದರು.
ಸಾಮಾಜಿಕ ಪರಿವರ್ತನೆಯ ಮುಂದುವರಿಕೆಯ ಭಾಗವಾಗಿ ಈ ಐತಿಹಾಸಿಕ ಗಣಮೇಳ ನಡೆಯುತ್ತಿರುವುದರಿಂದ ಸಮಸ್ತ ಶೋಷಿತ ಸಮುದಾಯಗಳು ಆಕರ್ಷಿತಗೊಂಡಿವೆ. ಅಸಂಖ್ಯೆಯಲ್ಲಿ ಈ ಗಣಮೇಳದಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಕರೆ ನೀಡುತ್ತೇವೆ ಎಂದು ಇದೇ ಸಂಧರ್ಭದಲ್ಲಿ ತಿಳಿಸಿದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications