ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕ ಬಹಿರಂಗ
ಬೆಂಗಳೂರು, ಸೆ. 15: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕ ಬಹಿರಂಗಗೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಹಾಕಿದ್ದ ಪ್ರಶ್ನೆಗೆ ಉತ್ತರವಾಗಿ ಜೈಲು ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಶಶಿಕಲಾಗೆ ನಾಲ್ಕು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು, 10 ಕೊಟಿ ರೂ ದಂಡವನ್ನು ಆಕೆ ನ್ಯಾಯಾಲಯಕ್ಕೆ ಕಟ್ಟಬೇಕಿದೆ. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಒಂದು ವರ್ಷಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಶಶಿಕಲಾ ಅವರು 1997 ಹಾಗೂ 2014ರಲ್ಲಿ 35 ದಿನಗಳು, 2017ರಲ್ಲಿ 17 ದಿನಗಳ ಪೆರೋಲ್ ಪಡೆದುಕೊಂಡಿದ್ದರು. ಫೆಬ್ರವರಿ 15, 2017ರಲ್ಲಿ ಬಂದ ಕೋರ್ಟ್ ಆದೇಶದಂತೆ ಶಶಿಕಲಾ ಹಾಗೂ ಇತರರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದರು. ಶಶಿಕಲಾ ಅವರು ತಮ್ಮ ಪತಿ ಎಂ.ನಟರಾಜನ್ ನಿಧನರಾದಾಗ ಪೆರೋಲ್ ಮೇಲೆ 15 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು. ತಂಜಾವೂರಿನಲ್ಲಿ ಪತಿಯ ಅಂತ್ಯಸಂಸ್ಕಾರ ವಿಧಿ ಮುಗಿಸಿಕೊಂಡು ಜೈಲಿಗೆ ಮರಳಿದ್ದರು.

ಬೇಗ ಬಿಡುಗಡೆಗೊಳ್ಳುತ್ತಾರೆ ಎನ್ನುವ ಸುದ್ದಿಗಳು
ಶಶಿಕಲಾ ಸನ್ನಡತೆ ಆಧಾರದಲ್ಲಿ ಬೇಗ ಬಿಡುಗಡೆಗೊಳ್ಳುತ್ತಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಆದರೆ ಇದೆಲ್ಲವೂ ಸುಳ್ಳು ಎಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿ ತಿಳಿಸಿದ್ದಾರೆ. ಕಳೆದ 14 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿರುವ ಕೈದಿಗಳಿಗೆ ಮಾತ್ರ ಈ ಅವಕಾಶ ದೊರೆಯಲಿದೆ. ದಂಡ ಕಟ್ಟಿದರೆ 2021ರ ಜನವರಿ 25 ಇಲ್ಲವೇ 2022ರ ಫೆಬ್ರವರಿ 15ಕ್ಕೆ ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಜನವರಿ 27, 2021ರಂದು ಬಿಡುಗಡೆ ದಿನಾಂಕ ನಿಗದಿಯಾಗಿದೆ ಎಂದು ಅಧಿಕೃತವಾಗಿ ಮಾಹಿತಿ ಬಂದಿದೆ.

2017ರಂದು ಜೈಲು ಶಿಕ್ಷೆ ಪ್ರಕಟ
ಶಶಿಕಲಾ ದತ್ತು ಪುತ್ರ ವಿಎನ್ ಸುಧಾಕರನ್, ಜೆ ಇಳವರಸಿ ಹಾಗೂ ಶಿಶಿಕಲಾ ಅವರಿಗೆ 2017ರ ಫೆಬ್ರವರಿ 15ರಂದು ಜೈಲುಶಿಕ್ಷೆ ಪ್ರಕಟವಾಗಿತ್ತು. 2014ರ ಸೆಪ್ಟೆಂಬರ್ ನಲ್ಲಿ ಸ್ಪೆಷಲ್ ಟ್ರಯಲ್ ಕೋರ್ಟ್ ನ್ಯಾ. ಜಾನ್ ಮೈಕೇಲ್ ಕನ್ಹಾ ಐಪಿಸಿ ಸೆಕ್ಷನ್ 109ರಡಿ ಜೆ ಜಯಲಲಿತಾ, ಶಶಿಕಲಾ, ಸುಧಾಕರನ್, ಇಳವರಸಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು. ಒಂದು ವೇಳೆ ನಿಗದಿತ ಅವಧಿಯಲ್ಲಿ ದಂಡ ಕಟ್ಟದಿದ್ದರೆ ಶಶಿಕಲಾ ಅವರು ಫೆಬ್ರವರಿ 27, 2022ರ ತನಕ ಶಿಕ್ಷೆ ಅನುಭವಿಸಬೇಕಾಗುತ್ತದೆ

ಭಾರಿ ಮೊತ್ತದ ದಂಡ ವಿಧಿಸಿದ್ದ ಕೋರ್ಟ್
ಜಯಲಲಿತಾಗೆ 100 ಕೋಟಿ ರೂ., ಶಶಿಕಲಾ, ಇಳವರಸಿ, ಸುಧಾಕರನ್‌ಗೆ ತಲಾ 10 ಕೋಟಿ ರೂ. ದಂಡ ವಿಧಿಸಿದ್ದರು. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಇನ್ನೂ ಒಂದು ವರ್ಷಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು.
Recommended Video

ಆದಾಯ ತೆರಿಗೆ ಇಲಾಖೆ NOC ಅಗತ್ಯ
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ ಹೆಚ್ಚು ದಂಡ ವಿಧಿಸಿದ್ದರೆ ಜೈಲು ಶಿಕ್ಷೆಯ ಅಂತಿಮ ಅವಧಿಯಲ್ಲಿ ಸಾಮಾನ್ಯವಾಗಿ ಕಟ್ಟುತ್ತಾರೆ. ಶಶಿಕಲಾ ಪ್ರಕರಣದಲ್ಲಿ ದಂಡವನ್ನು ಚೆಕ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ನೀಡಬಹುದಾಗಿದೆ. ಆದಾಯ ತೆರಿಗೆ ಇಲಾಖೆಯಿಂದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ ತರಬೇಕಾಗುತ್ತದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications