ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ಹೊರಕ್ಕೆ
ಬೆಂಗಳೂರು, ಜನವರಿ 25: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಐಎಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅವರನ್ನು ಐಸಿಯುನಿಂದ ಹೊರಗೆ ತರಲಾಗಿದೆ. ಚೇತರಿಸಿಕೊಳ್ಳುತ್ತಿದ್ದಾರೆ, ಆರೋಗ್ಯ ಸ್ಥಿರವಾಗಿದೆ. ಕೊರೊನಾ ಸೋಂಕಿನಿಂದ ಕೂಡ ಚೇತರಿಸಿಕೊಳ್ಳುತ್ತಿದ್ದಾರೆ.
ಪ್ರಜ್ಞೆ ಬಂದಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಪಲ್ಸ್ ರೇಟ್ ನಾರ್ಮಲ್ ಇದೆ, ಬಿಪಿ, ಬ್ಲಡ್ ಶುಗರ್, ಆಕ್ಸಿಜನ್ ಸ್ಯಾಚುರೇಷನ್ ಎಲ್ಲವೂ ನಾರ್ಮಲ್ ಆಗಿದೆ.ಶಶಿಕಲಾ ನಟರಾಜನ್ ಅವರಿಗೆ ಕೊರೊನಾ ಸೋಂಕು ವರದಿಯಾದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅವರೊಂದಿಗೆ ಜೈಲುವಾಸ ಅನುಭವಿಸುತ್ತಿರುವ ಅವರ ನಾದಿನಿ ಜೆ. ಇಳವರಸಿ ಅವರಲ್ಲಿಯೂ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಅನಾರೋಗ್ಯಕ್ಕೆ ಒಳಗಾದ ಶಶಿಕಲಾಗೆ ಕೋವಿಡ್ ಸೋಂಕು ಪತ್ತೆ ಶಶಿಕಲಾ ಅವರನ್ನು ದಾಖಲಿಸಿರುವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಇಳವರಸಿ ಅವರನ್ನು ಕೂಡ ಚಿಕಿತ್ಸೆಗಾಗಿ ದಾಖಲು ಮಾಡುವ ಸಾಧ್ಯತೆ ಇದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಇಳವರಸಿ ಮತ್ತು ಶಶಿಕಲಾ ಅವರು 2017ರ ಫೆಬ್ರವರಿಯಿಂದಲೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ. ಇಳವರಸಿ ಫೆಬ್ರವರಿ 5ರಂದು ಬಿಡುಗಡೆಯಾಗಲಿದ್ದಾರೆ.












Click it and Unblock the Notifications