• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಶಿಕಲಾ ಬಳಿಕ ಇಳವರಸಿಗೂ ಕೊರೊನಾ ವೈರಸ್ ಪಾಸಿಟಿವ್

|

ಬೆಂಗಳೂರು, ಜನವರಿ 23: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಐಎಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದ ಮರುದಿನ, ಅವರೊಂದಿಗೆ ಜೈಲುವಾಸ ಅನುಭವಿಸುತ್ತಿರುವ ಅವರ ನಾದಿನಿ ಜೆ. ಇಳವರಸಿ ಅವರಲ್ಲಿಯೂ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ.

ಅನಾರೋಗ್ಯಕ್ಕೆ ಒಳಗಾದ ಶಶಿಕಲಾಗೆ ಕೋವಿಡ್ ಸೋಂಕು ಪತ್ತೆಅನಾರೋಗ್ಯಕ್ಕೆ ಒಳಗಾದ ಶಶಿಕಲಾಗೆ ಕೋವಿಡ್ ಸೋಂಕು ಪತ್ತೆ

ಶಶಿಕಲಾ ಅವರನ್ನು ದಾಖಲಿಸಿರುವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಇಳವರಸಿ ಅವರನ್ನು ಕೂಡ ಚಿಕಿತ್ಸೆಗಾಗಿ ದಾಖಲು ಮಾಡುವ ಸಾಧ್ಯತೆ ಇದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಇಳವರಸಿ ಮತ್ತು ಶಶಿಕಲಾ ಅವರು 2017ರ ಫೆಬ್ರವರಿಯಿಂದಲೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ. ಇಳವರಸಿ ಫೆಬ್ರವರಿ 5ರಂದು ಬಿಡುಗಡೆಯಾಗಲಿದ್ದಾರೆ.

ಇಬ್ಬರೂ ಒಂದೇ ಸೆಲ್‌ನಲ್ಲಿದ್ದರು. ಶಶಿಕಲಾ ಅವರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಹೀಗಾಗಿ ಈ ಹಿಂದೆ ಆರೋಗ್ಯ ಸಮಸ್ಯೆ ಎದುರಿಸಿದ್ದ ಇಳವರಸಿ ಅವರಿಗೂ ಸಿ.ಟಿ ಸ್ಕ್ಯಾನ್ ಮಾಡಿಸುವಂತೆ ಅವರ ಮಗ ವಿವೇಕ್ ಮತ್ತು ವಕೀಲ ಅಶೋಗನ್ ಮನವಿ ಮಾಡಿದ್ದರು.

   ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ, ಆದ್ರೆ illegal mining ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- CM BSY | Oneindia Kannada

   ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಕೆ ಶಶಿಕಲಾ, ಇಳವರಸಿ ಮತ್ತು ವಿಎನ್ ಸುಧಾಕರನ್ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

   English summary
   A day after VK Sasikala tested positive for coronavirus, her sister in law J Ilavarasi who is serving jail term along with her also tested positive for covid-19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X