ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಶಿಕಲಾ ಹೆಲ್ತ್ ಬುಲೆಟಿನ್: ಜ.30ರಂದು ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

|
Google Oneindia Kannada News

ಬೆಂಗಳೂರು,ಜನವರಿ 29: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವಿ.ಕೆ. ಶಶಿಕಲಾ ಅವರ ಶಿಕ್ಷೆಯ ಅವಧಿ ಅಂತ್ಯಗೊಂಡಿದ್ದು, ಅವರು ಅಧಿಕೃತವಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇದೀಗ ಅವರ ಆರೋಗ್ಯ ಸ್ಥಿತಿಯೂ ಸುಧಾರಿಸುತ್ತಿದ್ದು, ಜನವರಿ 30ಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಜನವರಿ 30 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ

ಶಶಿಕಲಾ ಅವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು, ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ 4 ವರ್ಷಗಳ ಕಾಲ ಶಶಿಕಲಾ ಅವರು ಜೈಲುವಾಸ ಅನುಭವಿಸಿದ್ದು, ಬುಧವಾರವಷ್ಟೇ ಬಿಡುಗಡೆಯಾಗಿದ್ದರು.

 Sasikala Stable, May Be Discharged On Jan 30

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಹೆಲ್ತ್ ಬುಲೆಟಿನ್'ನಲ್ಲಿ ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಎಂದಿನಂತೆ ಸಾಮಾನ್ಯ ರೀತಿಯಲ್ಲಿ ಆಹಾರ ಸೇವನೆ ಮಾಡುತ್ತಿದ್ದಾರೆ.

ಜನವರಿ 30 ರಂದು ನಡೆಸಲಾಗುವ ಕೊರೊನಾ ಪರೀಕ್ಷೆಯಲ್ಲಿ ಸೋಂಕು ಇಲ್ಲದಿರುವುದು ಕಂಡು ಬಂದಿದೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಅವರ ಆರೋಗ್ಯ ಸ್ಥಿರವಾಗಿದೆ, ಸುಗರ್ ಕಂಟ್ರೋಲ್‌ನಲ್ಲಿದೆ,ಕೃತಕ ಉಸಿರಾಟವಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Expelled AIADMK leader VK Sasikala is said to be stable and progressing well at the Trauma Care Centre at Victoria Hospital. “She had undergone an RT-PCR test on Wednesday but the report is not yet known,” said sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X