ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್

|
Google Oneindia Kannada News

ಬೆಂಗಳೂರು,ಜನವರಿ 21: ಶಶಿಕಲಾ ನಟರಾಜನ್ ಅವರಿಗೆ ತೀವ್ರ ಉಸಿರಾಟದ ಕಾಯಿಲೆ(SARI)ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೂಲಗಳ ಪ್ರಕಾರ ಶಶಿಕಲಾ ಆಸ್ಪತ್ರೆಗೆ ದಾಖಲಾಗುತ್ತಲೇ ಅವರಿಗೆ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗಿದ್ದು, ಎಕ್ ರೇ ವರದಿಯಲ್ಲಿ ಅವರ ಶ್ವಾಸಕೋಶಗಳಲ್ಲಿ ಅಲ್ಪ ಪ್ರಮಾಣದ ಸೋಂಕು ಕಂಡುಬಂದಿದೆ.

ಶಶಿಕಲಾ ನಟರಾಜನ್ ಅಸ್ವಸ್ಥ, ಬೌರಿಂಗ್ ಆಸ್ಪತ್ರೆಗೆ ದಾಖಲುಶಶಿಕಲಾ ನಟರಾಜನ್ ಅಸ್ವಸ್ಥ, ಬೌರಿಂಗ್ ಆಸ್ಪತ್ರೆಗೆ ದಾಖಲು

ಮುಂಜಾಗ್ರತಾ ಕ್ರಮವಾಗಿ ವೈದ್ಯರು ಶಶಿಕಲಾ ಅವರನ್ನು ಆರ್ ಟಿಪಿಸಿಆರ್ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಈ ವೇಳೆ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಅವರನ್ನು ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.

Sasikala Tested Negative For Coronavirus

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಕೆ ಶಶಿಕಲಾಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಸ್ತುತ ಶಶಿಕಲಾ ಅವರಿಗೆ ಐಸಿಯುನಲ್ಲಿ ಆಮ್ಲಜನಕದ ವ್ಯವಸ್ಥೆ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕೆಲವೇ ತಿಂಗಳಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡಿನ ರಾಜಕೀಯದಲ್ಲಿ ಶಶಿಕಲಾ ಬಿಡುಗಡೆ ಸಂಚಲನ ಸೃಷ್ಟಿ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿರುವ ಬೌರಿಂಗ್ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಮನೋಜ್ ಕುಮಾರ್ ಅವರು, ಶಶಿಕಲಾ ಅವರಿಗೆ ತೀವ್ರವಾದ ಉಸಿರಾಟದ ಸೋಂಕು (SARI) ಗೆ ನಾವು ಚಿಕಿತ್ಸೆ ನೀಡುತ್ತಿದ್ದೇವೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

Recommended Video

Bangalore: Metro ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ, ಚೇತರಿಕೆ ಕಂಡ ನಮ್ಮ ಮೆಟ್ರೋ | Oneindia Kannada

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರು ಸೆರೆವಾಸ ಮುಗಿಸಿ ಜನವರಿ 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಆದರೆ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

English summary
Former AIADMK leader Sasikala, who was rushed to the Bowring and Lady Curzon Hospital in Bengaluru on Wednesday evening, has been shifted to the Intensive Care Unit (ICU) after she was diagnosed with Severe Acute Respiratory Illness (SARI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X