Satellite Ring Road: ಸ್ಯಾಟಲೈಟ್‌ ರಿಂಗ್‌ ರಸ್ತೆ ನಿರ್ಮಾಣದಿಂದ ಬೆಂಗಳೂರಿಗೆ ಏನೆಲ್ಲಾ ಪ್ರಯೋಜನೆಗಳಿವೆ.?

Satellite Ring Road: ರಾಜ್ಯ ರಾಜಧಾನಿ ದಿನದಿಂದ ದಿನಕ್ಕೆ ವಿಸ್ತರಣೆ ಆಗುತ್ತಲಿದ್ದು, ಅಭಿವೃದ್ಧಿ ಕಾರ್ಯಗಳು ಕೂಡ ನಡೆಯುಯ್ತಲೇ ಇವೆ. ಹಾಗೆಯೇ ಬಹುನಿರೀಕ್ಷಿತ, ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಯಾಟಲೈಟ್‌ ರಿಂಗ್‌ ರಸ್ತೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹಾಗಾದರೆ ಇದರಿಂದ ಏನೆಲ್ಲ ಉಪಯೋಗಗಳಾಗಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಸಂಸತ್ ಅಧಿವೇಶನದಲ್ಲಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಸ್ಯಾಟಲೈಟ್‌ ನಿರ್ಮಾಣ ಯೋಜನೆ ಅನುಮೋದನೆ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರ ಬಳಿ ಮನವಿ ಸಲ್ಲಿಸಿದ್ದು, ಇದೀಗ ಇದಕ್ಕೆ ಸ್ಪಂದಿಸಿದ ಅವರು ಕಾಮಗಾರಿಗೆ ಅನುಮೋದನೆ ನೀಡಿದ್ದಾರೆ.

Satellite ring road construction What is benefits for Bengaluru

ಕಳೆದ ಹಲವು ವರ್ಷಗಳಿಂದ ಹಳ್ಳ ಹಿಡಿದಿದ್ದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳನ್ನು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಂತಾಗಿದೆ.

4,750 ಕೋಟಿ ರೂಪಾಯಿ ಮೌಲ್ಯದ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಯೋಜನೆಯಿಂದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ ಕನಕಪುರ, ಮಾಗಡಿ, ರಾಮನಗರ, ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ ಹಾಗೂ ಆನೇಕಲ್‌ ಪ್ರದೇಶಗಳಿಗೆ ತುಂಬಾ ಉಪಯುಕ್ತ ಆದಂತಾಗಲಿದ್ದು, ಇದರಿಂದ ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಣದಜೊತೆಗೆ ಪ್ರಯಾಣದ ಸಮಯವು ಕಡಿಮೆ ಆಗಲಿದೆ.

ಇನ್ನು ಈ ಯೋಜನೆಗೆ ಅನುಮೋದನೆ ನೀಡಿರುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ತಮ್ಮ ಟ್ವೀಟ್‌ ಖಾತೆಯ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಡಾ.ಸಿ.ಎನ್.ಮಂಜುನಾಥ್ ಅವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಕಾಮಗಾರಿಗೆ ಅನುಮೋದನೆ ನೀಡಲು ಮನವಿ ಸಲ್ಲಿಸಿದ್ದರು. ಇದೀಗ ಇದಕ್ಕೆ ಸ್ಪಂದಿಸಿದ ಅವರು, 45 ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಹ 30 ದಿನಗಳಲ್ಲೇ ಅನುಮೋದನೆ ನೀಡಿದ್ದಾರೆ.

ಈ ಯೋಜನೆಯನ್ನು ಭಾರತ್​​ ಮಾಲಾ ಪರಿಯೋಜನಾ ಯೋಜನೆಯಡಿಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ದೈನಂದಿನ ಪ್ರಯಾಣಿಕರಿಗೆ ಪ್ರಯಾಣವನ್ನು ಸುಲಭಗೊಳಿಸಲು ಸಹಕಾರಿಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+