ರಮೇಶ್ ಬಗ್ಗೆ ದಿನೇಶ್ ಗುಂಡೂರಾವ್‌ಗೆ ವರದಿ ನೀಡಿದ ಸತೀಶ್ ಜಾರಕಿಹೊಳಿ

ಬೆಂಗಳೂರು, ಜನವರಿ 03: ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿರುವ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಲು ಇಂದು ಸಹೋದರ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಆಗಿದ್ದರು.

ಡಾಲರ್ಸ್‌ ಕಾಲೊನಿಯಲ್ಲಿಯ ದಿನೇಶ್ ಗುಂಡೂರಾವ್ ಅವರ ಮನೆಗೆ ಇಂದು ಭೇಟಿ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಬಹು ಸಮಯ ಮಾತುಕತೆ ನಡೆಸಿದರು.

ಸಂಪುಟ ವಿಸ್ತರಣೆ ವೇಳೆ ರಮೇಶ್‌ ಜಾರಕಿಹೊಳಿ ಅವರ ಸಚಿವ ಸ್ಥಾನವನ್ನು ಕಿತ್ತುಕೊಂಡು, ಸಹೋದರ ಸತೀಶ್‌ ಜಾರಕಿಹೊಳಿ ಅವರಿಗೆ ಕೊಡಲಾಗಿದೆ. ಇದು ರಮೇಶ್ ಅವರಿಗೆ ಅಸಮಾಧಾನ ತರಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ಸಮಾಧಾನಪಡಿಸುವ ಜವಾಬ್ದಾರಿಯನ್ನು ಸತೀಶ್‌ ಜಾರಕಿಹೊಳಿ ಅವರಿಗೆ ವಹಿಲಾಗಿತ್ತು.

Satish Jarkiholi met KPCC president Dinesh Gundurao today

ಅದರಂತೆ ನಿನ್ನೆ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾತನಾಡಿರುವ ಸತೀಶ್ ಜಾರಕಿಹೊಳಿ ಮಾತುಕತೆಯ ವರದಿ ಒಪ್ಪಿಸಲು ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಆಗಿದ್ದಾರೆ.

ನಿನ್ನೆ ರಮೇಶ್ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯ ಭೇಟಿ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಭೇಟಿ ಸಾಧ್ಯವಾಗಿಲ್ಲ. ಹಾಗಾಗಿ ಇಂದು ದಿನೇಶ್ ಗುಂಡೂರಾವ್ ಸೇರಿ ಕಾಂಗ್ರೆಸ್ ಮುಖಂಡರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+