15 ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಎಂದ ಸತೀಶ್ ಜಾರಕಿಹೊಳಿ
Recommended Video

ಬೆಂಗಳೂರು, ಸೆಪ್ಟೆಂಬರ್ 11: ಇನ್ನು 15 ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿಯ ಮಾತುಗಳು ಮತ್ತೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಜಾರಕಿಹೊಳಿ ಸಹೋದರರಿಬ್ಬರು ಬಿಜೆಪಿಗೆ ಸೇರುತ್ತಾರೆ ಎನ್ನುವ ಮಾತುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಡಾ, ಜಿ ಪರಮೇಶ್ವರ ಅವರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಅವರ ಮನವೊಲಿಸಲು ಯತ್ನಿಸಿದ್ದಾರೆ.
ಬೇರೆ ಪಕ್ಷಕ್ಕೆ ಸೇರುವುದು ಮುಗಿದುಹೋದ ಅಧ್ಯಾಯ ಕೆಲವು ಭರವಸೆಗಳನ್ನು ವರಿಷ್ಠರು ನೀಡಿದ್ದಾರೆ ಹಾಗಾಗಿ ಪಕ್ಷ ತೊರೆಯುವ ಮಾತಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ, ಇಷ್ಟೇ ಅಲ್ಲದೆ ಸತೀಶ್ ಜಾರಕಿಹೊಳಿ ಬಿಜೆಪಿ ಸೇರುವ ಕುರಿತು ಮಾತನಾಡಿದ್ದ ಅವರು ಸತೀಶ್ ಏನು ಹೇಳಿದ್ದಾರೋ ಅದು ನನಗೆ ಗೊತ್ತಿಲ್ಲ, ಅದು ಅವರ ವಯಕ್ತಿಕ ವಿಚಾರ ಎಂದಿದ್ದರು. ಸತೀಶ್ ಜಾರಕಿಹೊಳಿಯವರು ಎಚ್‌ಡಿ ರೇವಣ್ಣ ಅವರನ್ನು ಮಂಗಳವಾರ ವಿಧಾನಸೌಧದಲ್ಲಿ ಭೇಟಿಯಾಗಿದ್ದಾರೆ.
ಮತ್ತೀಗ ಸತೀಶ್ ಜಾರಕಿಹೊಳಿ ಪಕ್ಷ ಬಿಡುವುದು ಪಕ್ಕಾ ಎನ್ನಲಾಗುತ್ತಿದೆ, ಈ ಕುರಿತು ಚರ್ಚೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿರುವ ಮಾತು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ನಾಯಕರು ಸಂಪರ್ಕ ಮಾಡಿಲ್ಲ
ಇಲ್ಲಿಯವರೆಗೆ ಯಾರೂ ಕೂಡ ನಮ್ಮನ್ನು ಸಂಪರ್ಕಿಸಿಲ್ಲ, ಶ್ರೀರಾಮುಲು ಕೂಡ ಮಾತನಾಡಿಲ್ಲ, ರಮೇಶ್ ಜಾರಕಿಹೊಳಿ ಮಾತನಾಡಿದ್ದಾರಾ ಎನ್ನುವುದು ನನಗೆ ಗೊತ್ತಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಹಸ್ತಕ್ಷೇಪ
ಬೆಳಗಾವಿ ರಾಜಕಾರಣದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ, ಈ ಕುರಿತು ಸತೀಶ್ ಜಾರಕಿಹೊಳಿ ಮಾತನಾಡಿ, ನಾವು ಮೊದಲು ಹೇಳಿದ್ದೆವು, ಈಗಲೂ ಹೇಳುತ್ತಿದ್ದೇವೆ, ನಮ್ಮ ಜಿಲ್ಲೆಯಲ್ಲಿ ಬೇರೆಯವರು ಮೂಗು ತೂರಿಸುವುದು ಬೇಡ, ನಮ್ಮ ಜಿಲ್ಲೆಯಲ್ಲಿ ನಾವು ರಾಜಕಾರಣ ಹೇಗೆ ಮಾಡಬೇಕೆಂಬುದು ನಮಗೆ ತಿಳಿದಿದೆ ಎಂದರು.

ನಾನು ಮುಖ್ಯಮಂತ್ರಿ ಯಾಕೆ ಆಗಬಾರದು
ಸತೀಶ್ ಜಾರಕಿಹೊಳಿಯನ್ನು ಮುಖ್ಯಮಂತ್ರಿ ಮಾಡಲು ಸಹೋದರ ರಮೇಶ್ ಜಾರಕಿಹೊಳಿ ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು, ಈ ಕುರಿತು ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕೆ ಆಗಬಾರದು ಇನ್ನು 10 ವರ್ಷದೊಳಗೆ ಮುಖ್ಯಮಂತ್ರಿಯಾಗಬೇಕು ಎನ್ನುವ ಹಂಬಲವಿದೆ ಎಂದಿದ್ದಾರೆ.

ರಮೇಶ್ ಹಾಗೂ ನನ್ನ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ
ಬೆಳಗಾವಿ ರಾಜಕಾರಣದಲ್ಲಿ ಸ್ವಲ್ಪ ಸಮಸ್ಯೆ ಇದೆ, ಜಿಲ್ಲೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವ ಶಕ್ತಿ ಇದೆ, ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಆದರೆ ನಾವಿಬ್ಬರೂ ಒಂದಾಗಿಯೇ ಇದ್ದೇವೆ, ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ನಮಗೆ ಮುಖಭಂಗವೇನೂ ಆಗಿಲ್ಲ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದರು.












Click it and Unblock the Notifications