ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ವಿವಿ ಉಳಿಸಿ ಟ್ವಿಟ್ಟರ್ ಅಭಿಯಾನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 17: ಕರ್ನಾಟಕ ರಕ್ಷಣಾ ವೇದಿಕೆಯು ಕನ್ನಡವಿವಿ ಉಳಿಸಿ ಎನ್ನುವ ಟ್ವಿಟ್ಟರ್ ಅಭಿಯಾನವನ್ನು ಡಿಸೆಂಬರ್ 18 ರಂದು ಹಮ್ಮಿಕೊಂಡಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಟ್ವಿಟರ್ ಆಂದೋಲನ ಹಮ್ಮಿಕೊಂಡಿದೆ.

#ಕನ್ನಡವಿವಿಉಳಿಸಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ತಾತ್ಸಾರ ಧೋರಣೆಯನ್ನು ಖಂಡಿಸಿ ಎಲ್ಲ ಕನ್ನಡ ಮನಸುಗಳು ಸಂಜೆ 5 ಗಂಟೆಯಿಂದ ಟ್ವೀಟ್ ಮಾಡಬೇಕೆಂದು ಕರವೇ ಕೋರುತ್ತದೆ.

Save Kannada VV Twitter Campaign By Karnataka Rakshana Vedike

ಕನ್ನಡ ನುಡಿ, ಸಾಹಿತ್ಯ, ಪರಂಪರೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ.

ವರ್ಷಕ್ಕೆ ಆರು ಕೋಟಿ ಅನುದಾನ ಬೇಡುವ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಈ ವರ್ಷ‌‌ನೀಡಿರುವ ಅನುದಾನ ಕೇವಲ 50 ಲಕ್ಷ‌ ರುಪಾಯಿಗಳು. ಸಂಸ್ಥೆಯ‌ ಗುತ್ತಿಗೆ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಷ್ಟು ವಿವಿ ಬಡವಾಗಿದೆ. ಹೀಗಿರುವಾಗ ಸಂಶೋಧನೆಯಂಥ ಕೆಲಸಗಳಿಗೆ ಹಣವೆಲ್ಲಿರಲು ಸಾಧ್ಯ?

ರಾಜ್ಯ ಸರ್ಕಾರದ ಬಳಿ ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸಹೊಸ ಪ್ರಾಧಿಕಾರ ಸ್ಥಾಪಿಸಲು ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ.

Recommended Video

KL Rahul ಪಾಲಿಗೆ 2020 ಬಹಳ ವಿಶೇಷ ವರ್ಷ | Oneinda Kannada

ನಾಳೆ (18-12-2020) ರಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ‌ ಟ್ವಿಟರ್ ಆಂದೋಲನ‌ ನಡೆಸುವುದರ ಜತೆಗೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ತಿಳಿಸಿದ್ದಾರೆ.

English summary
Karnataka Rakshana Vedike state president TA Narayanagowda Organised Save Kannada vv twitter campaign on December 18, Evening 5 o clock.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X