ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮನೆ ಬಾಗಿಲಿಗೆ ಸಂಚಾರ ಕಲಿಕಾ ಕೇಂದ್ರ

|
Google Oneindia Kannada News

ಬೆಂಗಳೂರು, ಅ. 22: ಅಕ್ಷರ ಕಲಿಕೆಯಿಂದ ದೂರ ಉಳಿದಿರುವ ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಮನೆ ಬಾಗಿಲಲ್ಲೇ ಶಿಕ್ಷಣ ಕೊಡುವ "ಸೇವ್ ದಿ ಚಿಲ್ಡ್ರನ್" ಮಕ್ಕಳ ಸ್ನೇಹಿ ಸಂಚಾರ ಕಲಿಕಾ ಕೇಂದ್ರಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶುಕ್ರವಾರ ಚಾಲನೆ ನೀಡಿದರು.

ವಿಧಾನಸೌಧ ಆವರಣದಲ್ಲಿ ಸೇವ್ ದಿ ಚಿಲ್ಡ್ರನ್ ಸ್ವಯಂ ಸೇವಾ ಸಂಸ್ಥೆ ಒದಗಿಸಿದ ಮೂರು ಸಂಚಾರ ಕಲಿಕಾ ಬಸ್ ಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಸಿರು ನಿಶಾನೆ ತೋರಿದರು.

ಬೇರೆ ಬೇರೆ ಕಾರಣಗಳಿಂದ ಮಕ್ಕಳು ಶಾಲೆಗಳಿಂದ ಹೊರಗುಳಿದಿರುತ್ತಾರೆ. ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಬೇಕು. ವಲಸಿಗರ ಮಕ್ಕಳಿಗೆ ಸಾಧ್ಯವಾದಷ್ಟು ಅಕ್ಷರ ಜ್ಞಾನ ನೀಡಲು ಅವರಿದ್ದಲ್ಲಿಗೆ ತೆರಳಿ ಕಲಿಕಾ ಸಾಮಗ್ರಿ ಒದಗಿಸಿ ಅಕ್ಷರ ಜ್ಞಾನ ನೀಡುವ ಪ್ರಯತ್ನವನ್ನು ಸೇವ್ ದಿ ಚಿಲ್ಡ್ರನ್ ಮಾಡುತ್ತಿದೆ. ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ ಸೇರಿದಂತೆ ಇನ್ನಿತರ ಆರೋಗ್ಯ ವಿಚಾರಗಳ ಕುರಿತಾಗಿಯು ಮಕ್ಕಳಿಗೆ ಮಾಹಿತಿ ನೀಡಲಾಗುತ್ತದೆ. ಮಕ್ಕಳ ಶಿಕ್ಷಣ ವಿಚಾರದಲ್ಲಿ ಸರಕಾರದ ಜೊತೆಗೆ ಸಂಘ-ಸಂಸ್ಥೆಗಳು ನೆರವಾಗುತ್ತಿರುವುದು ಶ್ಲಾಘನೀಯ' ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

Save the Children project for school dropouts

ಸೇವ್ ದಿ ಚಿಲ್ಡ್ರನ್‌­ನ ಮಿನಿ ಬಸ್‌ಗಳಲ್ಲಿ ಪುಸ್ತಕಗಳು, ಕತೆ ಪುಸ್ತಕಗಳು, ನೋಟ್ ಬುಕ್, ಗಣಿತ, ವಿಜ್ಞಾನ ಸೇರಿದಂತೆ ಇನ್ನಿತರ ವಿಷಯಗಳ ಕಲಿಕಾ ಸಾಮಗ್ರಿಗಳು ಇರುತ್ತವೆ. ಮಕ್ಕಳ ಹುಟ್ಟು ಹಬ್ಬವನ್ನು ಆಚರಿಸಲು ಕೂಡ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಅಭಿವೃದ್ಧಿ ಕಾರ್ಯದಲ್ಲಿ ಸರಕಾರದ ಜೊತೆ ಕೈ ಜೋಡಿಸುತ್ತೇವೆ ಎಂದು ಸೇವ್ ದಿ ಚಿಲ್ಡ್ರನ್ ಪ್ರತಿನಿಧಿಗಳು ತಿಳಿಸಿದ್ದಾರೆ. ಸರಕಾರದಿಂದ ಅಗತ್ಯ ಸಹಕಾರ ನೀಡಲಾಗುತ್ತದೆ' ಎಂದು ಸಚಿವರು ಇದೇ ವೇಳೆ ತಿಳಿಸಿದರು.

ಬಡವರು, ಕೊಳೆಗೇರಿ ಮಕ್ಕಳು ನೆಲೆಸಿರುವ ನಗರದ 30 ಪ್ರದೇಶಗಳಿಗೆ ತೆರಳುವ ಈ ಮೂರು ಮಿನಿ ಬಸ್­ಗಳು ಮಕ್ಕಳ ವ್ಯಾಸಂಗಕ್ಕೆ ಅಗತ್ಯವಾದ ಕಲಿಕಾ ಸಾಮಗ್ರಿಗಳನ್ನು ಒದಗಿಸಿ ಅಕ್ಷರಜ್ಞಾನ ನೀಡಲಿವೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಶಾಸಕರಾದ ಹರೀಶ್ ಪೂಂಜಾ, ಸೇವ್ ದಿ ಚಿಲ್ಡ್ರನ್‌ನ ಅಂಗಸಂಸ್ಥೆಯಾದ 'ಸಾಮೂಹಿಕ ಶಕ್ತಿ'ಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಲಕ್ಷ್ಮೀ ಪಟ್ಟಾಭಿರಾಮನ್, ಸೇವ್ ದಿ ಚಿಲ್ಡ್ರನ್ ಸಂಸ್ಥೆಯ ಸಿಇಒ ಸುದರ್ಶನ್ ಸುಚಿ ಸೇರಿದಂತೆ ಸಂಸ್ಥೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Save the Children project for school dropouts

ತರಗತಿಗಳಲ್ಲಿ ಹಾಜರಾತಿ ಹೆಚ್ಚಳ: ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಸುಧಾರಣೆ ಕಾಣುತ್ತಿದೆ. ಬಿಸಿಯೂಟ ಕೂಡ ಆರಂಭವಾಗಿರುವುದರಿಂದ ಇನ್ನು ಮುಂದೆ ಮಕ್ಕಳ ಹಾಜರಾತಿ ಮತಷ್ಟು ಹೆಚ್ಚಲಿದೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಮಕ್ಕಳ ಹಾಜರಾತಿ ಮತ್ತು ಬಿಸಿಯೂಟ ಪುನಾರಂಭದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲೆಗಳಿಗೆ ಮಕ್ಕಳು ಉತ್ಸಾಹದಿಂದ ಬರುತ್ತಿದ್ದಾರೆ.

Save the Children project for school dropouts

Recommended Video

Deepika Padukone ಹೊಸ IPL ತಂಡವನ್ನು ಖರೀದಿಸಿದ್ದಾರೆ | Oneindia Kannada

ಜಿಲ್ಲೆ, ತಾಲೂಕು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗೆ ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಅ.21ರಿಂದ ಬಿಸಿಯೂಟ ಆರಂಭಿಸಿರುವ ಕಾರಣ ಹಾಜರಾತಿ ಪ್ರಮಾಣ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ವಿಶ್ವಾಸವಿದೆ. ಅ.25ರಿಂದ 1 ರಿಂದ 5ನೇ ತರಗತಿಗಳ ಪುನಾರಂಭ ಹಾಗೂ ನವೆಂಬರ್ ಮೊದಲ ವಾರದಲ್ಲಿ ಎಲ್ಲ ತರಗತಿಗಳಿಗೆ ಬಿಸಿಯೂಟ ನೀಡಲಾಗುತ್ತದೆ. ಇದರಿಂದ ಹಾಜರಾತಿ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸವಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಾಪಸ್ ತರಗತಿಗಳಿಗೆ ಕರೆತರುವ ಪ್ರಯತ್ನವನ್ನು ಶಿಕ್ಷಣ ಇಲಾಖೆ ಮುಂದುವರೆಸಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

English summary
Save the Children programme for school dropouts in Bengaluru: Education Minister B.C. Nagesh Inaugurates save the children education project know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X