ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಟಿ ಸವಿ ಮಾದಪ್ಪ ಆತ್ಮಹತ್ಯೆ : ಕಿರುತೆರೆ ನಟ ವಿವೇಕ್ ಮತ್ತು ಮೇಕಪ್ ಮಹೇಶ್ ಪೊಲೀಸರ ವಶಕ್ಕೆ

|
Google Oneindia Kannada News

ಬೆಂಗಳೂರು, ಅ. 01: ನಟಿ ಸೌಜನ್ಯ ಅಲಿಯಾಸ್ ಸವಿಮಾದಪ್ಪ ಆತ್ಮಹತ್ಯೆ ಪ್ರಕರಣ ಸಂಬಂಧ ಬಾಯ್‌ ಫ್ರೆಂಡ್ ಹಾಗೂ ಮೇಕಪ್ ಮೆನ್ ನನ್ನು ಕುಂಬಳಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌಜನ್ಯ ಗೆಳೆಯ ಕಿರುತೆರೆ ನಟ ವಿವೇಕ್ ಹಾಗೂ ಮೇಕಪ್ ಬಾಯ್ ಮಹೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೃತ ಸೌಜನ್ಯಾ ತಂದೆ ಪ್ರಭು ಮಾದಪ್ಪ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಿರುತೆರೆ ನಟ ವಿವೇಕ್ ಹಾಗೂ ಮೇಕಪ್ ಬಾಯ್ ಮಹೇಶ್ ನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೌಜನ್ಯ ಆತ್ಮಹತ್ಯೆಗೂ ಒಂದು ತಾಸು ಮೊದಲು ನಡೆದಿದ್ದ ಆ ಘಟನೆಯೇ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಲು ಕಾರಣವಾಗಿದೆ. ಹಾಗಾದರೆ ಸೌಜನ್ಯ ಆತ್ಮಹತ್ಯೆಗೂ ಮುನ್ನ ನಡೆದಿದ್ದ ಘಟನೆ ಏನು ? ಸೌಜನ್ಯ ಅವರ ತಂದೆ ಆ ಘಟನೆ ಉಲ್ಲೇಖಿಸಿ ದೂರು ನೀಡಿದ ನಂತರ ಪೊಲೀಸ್ ತನಿಖೆಯಲ್ಲಿ ಆದ ಬೆಳವಣಿಗೆ ವಿವರ ಇಲ್ಲಿದೆ.

ಸೆ. 30 ರಂದು ದೊಡ್ಡಬೆಲೆ ಅಪಾರ್ಟ್‌ಮೆಂಟ್‌ನಲ್ಲಿ ನೇಣಿಗೆ ಶರಣಾಗಿದ್ದ ಸವಿ ಮಾದಪ್ಪ ಆತ್ಮಹತ್ಯೆಗೂ ಕೆಲವು ಮಹತ್ವದ ಬೆಳವಣಿಗಳು ನಡೆದಿವೆ. ಈ ಎಲ್ಲಾ ಘಟನೆಗಳನ್ನು ಆಧರಿಸಿ ಸೌಜನ್ಯ ಅವರ ತಂದೆ ಪ್ರಭು ಮಾದಪ್ಪ ಅವರು ದೂರು ನೀಡಿದ್ದಾರೆ. ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟನೆ ಮಾಡುವ ಸಂಬಂಧ ನನ್ನ ಮಗಳು ಐದು ವರ್ಷದಿಂದಲೂ ಬೆಂಗಳೂರಿನಲ್ಲಿದ್ದಳು. ಎರಡು ವರ್ಷದಿಂದ ಸನ್ವರ್ಥ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಳು. ನನ್ನ ಮಗಳಿಗೆ ವಿವೇಕ್ ಎಂಬಾತ ಪರಿಚಯವಾಗಿದ್ದು, ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರ ನನ್ನ ಮಗಳು ನನ್ನ ಪತ್ನಿ ರೇಣುಕಾ ಬಳಿ ಹೇಳಿದ್ದಳು.

 Savi Madappa Suicide Case: Kumbalgodu Police Taken Actress Boyfriend and Makeup Boy into Custody

ಸೆ. 30 ರಂದು ನನ್ನ ಮಗಳು ಆತ್ಮಹತ್ಯೆಗೂ ಒಂದು ತಾಸು ಮುನ್ನ ಆಕೆಯ ಗೆಳೆಯ ಅಂತ ಹೇಳಿಕೊಂಡಿದ್ದ ವಿವೇಕ್ ನನ್ನ ಪತ್ನಿ ರೇಣುಕಾಗೆ ಕರೆ ಮಾಡಿದ್ದ. ನಿಮ್ಮ ಮಗಳು ನನ್ನನ್ನು ಮುದುವೆಯಾಗದಿದ್ದರೆ ತಲೆ ಹೊಡೆದು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಹೀಗೆ ಬೆದರಿಕೆ ಬಂದ ಒಂದು ತಾಸಿನ ಬಳಿಕ ನನ್ನ ಹಿರಿಯ ಮಗಳು ಭಾಗ್ಯಶ್ರೀ ನಮಗೆ ಕರೆ ಮಾಡಿ ನನ್ನ ಪುತ್ರಿ ಸಾವನ್ನಪ್ಪಿದ್ದಾಳೆ ಎಂಬ ಸಂಗತಿಯನ್ನು ತಿಳಿಸಿದಳು. ನನ್ನ ಮಗಳನ್ನು ಮದುವೆಯಾಗುವಂತೆ ವಿವೇಕ್ ಪೀಡಿಸುತ್ತಿದ್ದ. ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಮಹೇಶ್ ಕಾರಣ. ಇವರ ಕಿರುಕುಳ ತಾಳಲಾರದೇ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರ್ಥಿಕವಾಗಿ ಅವಳಿಗೆ ಯಾವ ಸಮಸ್ಯೆಯೂ ಇರಲಿಲ್ಲ. ಅವಳ ಬಳಿ ಆರು ಲಕ್ಷ ರೂ. ಹಣವಿತ್ತು. ಎರಡು ದಿನದ ಹಿಂದಷ್ಟೇ ನಾನೇ ಒಂದು ಲಕ್ಷ ರೂ. ಹಣವನ್ನು ಕೊಟ್ಟು ಕಳಿಸಿದ್ದೆ ಎಂದು ಮೃತ ಸೌಜನ್ಯಾಳ ತಂದೆ ಪ್ರಭು ಮಾದಪ್ಪ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರನ್ನು ಆಧರಿಸಿಯೇ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸವಿ ಮಾದಪ್ಪ ಅವರ ತಂದೆ ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದಿದ್ದೇವೆ. ಆತ್ಮಹತ್ಯೆಗೂ ಮುನ್ನ ಸವಿಮಾದಪ್ಪ ಅವರನ್ನು ಭೇಟಿ ಮಾಡಿದ್ದರೇ ? ಮದುವೆ ವಿಚಾರವಾಗಿ ಕಿರುತೆರೆ ನಟಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳೇ? ಇವರು ನೀಡಿದ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡರೇ ಎಂಬುದರ ಬಗ್ಗೆ ಕುಲಂಕುಶವಾಗಿ ತನಿಖೆ ನಡೆಸುತ್ತಿದ್ದೇವೆ ಎಂದು ರಾಮನಗರ ಪೊಲೀಸ್ ಅಧೀಕ್ಷಕ ಎಸ್. ಗಿರೀಶ್ ಸ್ಪಷ್ಟಪಡಿಸಿದ್ದಾರೆ.

 Savi Madappa Suicide Case: Kumbalgodu Police Taken Actress Boyfriend and Makeup Boy into Custody

ಮರಣೋತ್ತರ ಪರೀಕ್ಷೆ ಮುಕ್ತಾಯ: ಕುಂಬಳಗೋಡು ಸಮೀಪದ ರಾಜ ರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ಸವಿ ಮಾದಪ್ಪ ಅವರ ಮರಣೋತ್ತರ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಧ್ಯಾಹ್ನ 12 ಯೊಳಗೆ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತಿದೆ. ಇನ್ನು ಸೌಜನ್ಯ ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಡಗಿನ ಕುಶಾಲನಗರದಲ್ಲಿ ಮೃತಳ ಅಂತ್ಯಕ್ರಿಯೆ ನಡೆಯಲಿದೆ.

Recommended Video

ಮೈಮೇಲೆ ಎಗರಿದ ಚಿರತೆ ಜೊತೆ ಮಹಿಳೆಯ ಫೈಟಿಂಗ್ ವಿಡಿಯೋ ವೈರಲ್ | oneindia kannada

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
Soujanya aka Savi Madappa Suicide Case: Kumbalgodu Police Taken Actress Boyfriend Vivek and Makeup Boy Mahesh into Custody filed FIR against them. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X