ಬೆಂಗಳೂರಲ್ಲಿ ಇನ್ನು 6 ರಿಂದ 8 ತಿಂಗಳು ಪವರ್ ಕಟ್!
ಬೆಂಗಳೂರು, ಮಾರ್ಚ್ 14; ಬೇಸಿಗೆ ಈಗಷ್ಟೇ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಪ್ರತಿದಿನ ಪವರ್ ಕಟ್ ಬಿಸಿ ಜನರಿಗೆ ತಟ್ಟುತ್ತಿದೆ. ಅದರಲ್ಲೂ ವಾರಾಂತ್ಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬೆಳಗ್ಗೆಯಿಂದ ಸಂಜೆಯ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವಿವಿಧ ಬಡಾವಣೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ಹೊರಡಿಸುವುದು ಸಾಮಾನ್ಯವಾಗಿದೆ. ಆದರೆ ಜನರನ್ನು ಚಿಂತೆಗೆ ದೂಡುವ ಮತ್ತೊಂದು ಸುದ್ದಿ ಈಗ ಬಂದಿದೆ.
ಮುಂದಿನ 6 ರಿಂದ 8 ತಿಂಗಳುಗಳ ಕಾಲ ಬೆಂಗಳೂರು ನಗರದಲ್ಲಿ ಪವರ್ ಕಟ್ ಮುಂದುವರೆಯಲಿದೆ. ಅದರಲ್ಲೂ ವಾರಾಂತ್ಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಹೆಚ್ಚು ಅಡಚಣೆ ಉಂಟಾಗಲಿದೆ. ನಿಯಮಿತ ಮತ್ತು ಅನಿಯಮಿತ ಪವರ್ ಕಟ್ ಬೆಂಗಳೂರು ನಗರದಲ್ಲಿ ಜಾರಿಯಲ್ಲಿರಲಿದೆ.

ಬೆಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆ ಆಧುನೀಕರಣಗೊಳಿಸುವತ್ತ ಬೆಸ್ಕಾಂ ಹೆಜ್ಜೆ ಇಟ್ಟಿದೆ. ಇದರ ಭಾಗವಾಗಿ ನೆಲದಡಿಯಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ ಮಾಡುವ ಕಾಮಗಾರಿ ವಿವಿಧ ಬಡಾವಣೆಯಲ್ಲಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲಾ ಓವರ್ ಹೆಡ್ ಕೇಬಲ್‌ಗಳನ್ನು ಭೂಗತಗೊಳಿಸಲಾಗುತ್ತದೆ.
ಈ ಕಾಮಗಾರಿ ಪೂರ್ಣಗೊಳಿಸಲು ಬೆಸ್ಕಾಂ ನಿಗದಿತ ಗುರಿಯನ್ನು ಹಾಕಿಕೊಂಡಿದೆ. ಈ ಗುರಿ ತಲುಪಲು 6 ರಿಂದ 8 ತಿಂಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ನಿಯಮಿತ, ಅನಿಯಮಿತ ವಿದ್ಯುತ್ ಕಡಿತ ಜಾರಿಯಲ್ಲಿರುತ್ತದೆ. ಅದರಲ್ಲೂ ವಾರಾಂತ್ಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 7 ರ ತನಕ ವಿದ್ಯುತ್ ಕಡಿತವಾಗಲಿದೆ ಎಂದು ಅಂದಾಜಿಸಲಾಗಿದೆ.
ಕಳೆದ ಮೂರು ವಾರಾಂತ್ಯಗಳಿಂದ ವಿದ್ಯುತ್ ಕಡಿತವಾಗುತ್ತಿದೆ. ಬೆಸ್ಕಾಂ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ತನಕ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಹೇಳುತ್ತದೆ. ಆದರೆ ಕರೆಂಟ್ ಬರುವಾಗ ಸಂಜೆ 7 ರಿಂದ 8 ಗಂಟೆ ಆಗುತ್ತದೆ ಎಂದು ಮಾಗಡಿ ರಸ್ತೆಯ ನಿವಾಸಿಯೊಬ್ಬರು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಇನ್ನೂ ಹಲವು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಆದರೆ ದಿನವಿಡೀ ವಿದ್ಯುತ್ ಪೂರೈಕೆ ಇಲ್ಲದಿರುವ ಕಾರಣ ಜನರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ವಾರಾಂತ್ಯದಲ್ಲಿ ದಿನಪೂರ್ತಿ ವಿದ್ಯುತ್ ಕಡಿತಗೊಂಡರೆ ಏನು ಮಾಡಬೇಕು? ಎಂದು ಜನರು ಪ್ರಶ್ನಿಸಿದ್ದಾರೆ.
ಯುಪಿಎಸ್ ಇದ್ದರೆ ಗೀಸರ್, ವಾಷಿಂಗ್ ಮೆಷಿನ್ ಬಳಕೆ ಮಾಡಲು ಆಗುವುದಿಲ್ಲ. ಆರ್. ಆರ್. ನಗರ, ಪೀಣ್ಯ, ಸರ್ಜಾಪುರ, ಕನಕನಪುರ ರಸ್ತೆ, ರಾಜಾಜಿನಗರ, ಹೆಚ್‌ಎಸ್‌ಆರ್ ಲೇಔಟ್, ಅತ್ತಿಗುಪ್ಪೆ ಮುಂತಾದ ಸ್ಥಳಗಳಲ್ಲಿ ವಾರಾಂತ್ಯದಲ್ಲಿ ವಿದ್ಯುತ್ ಪೂರೈಕೆ ಇಲ್ಲ ಎಂಬ ವರದಿಗಳು ಬರುತ್ತಿವೆ.
ನೆಲದಡಿಯಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ ಮಾಡುವ ಕಾಮಗಾರಿ ನಗರದಲ್ಲಿ ಶೇ 80ರಷ್ಟು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಸಹ ವೇಗವಾಗಿ ನಡೆಯುತ್ತಿವೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ. ಆದರೆ ಕಾಮಗಾರಿ ಪೂರ್ಣಗೊಳ್ಳುವ ತನಕ ವಿವಿಧ ಬಡಾವಣೆ ನಿವಾಸಿಗಳು ಪವರ್ ಕಟ್ ಎದುರಿಸುವುದು ಅನಿವಾರ್ಯವಾಗಲಿದೆ.
ಸಮಯ, ಕಡಿಮೆ ದಟ್ಟಣೆ, ಗ್ರಿಡ್ ಲೋಡ್, ಬಡಾವಣೆವಾರು ವಿಭಾಗ ಮುಂತಾದ ಆಧಾರದ ಮೇಲೆ ಬೆಸ್ಕಾಂ ಕಾಮಗಾರಿ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳುತ್ತಿದೆ. ವಾರಾಂತ್ಯದಲ್ಲಿ ವಿದ್ಯುತ್ ಬಳಕೆ ಹೆಚ್ಚಿರುವುದರಿಂದ ಪವರ್ ಕಟ್ ಮಾಡುವುದು ಅನಿವಾರ್ಯವಾಗಲಿದೆ.
ರಾಜ್ಯದ ವಿದ್ಯುತ್ ಉತ್ಪಾದನೆಯ ಶೇ 50ರಷ್ಟು ವಿದ್ಯುತ್ ಬೆಂಗಳೂರು ನಗರದಲ್ಲಿಯೇ ಬಳಕೆಯಾಗುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ತೊಂದರೆ ಉಂಟಾಗಬಾರದು ಎಂದರೆ ಜನರು ಈಗ ಬೆಸ್ಕಾಂ ಜೊತೆ ಸಹಕರಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.
ವ್ಯವಸ್ಥೆ ಆಧುನೀಕರಣ; ಓವರ್ ಹೆಡ್ ಕೇಬಲ್‌ಗಳನ್ನು ಭೂಗತಗೊಳಿಸುವ ಮೂಲಕ ವಿದ್ಯುತ್ ವ್ಯವಸ್ಥೆ ಆಧುನೀಕರಣಗೊಳಿಸುವುದರಿಂದ ವಿದ್ಯುತ್ ಅವಘಡಗಳು ಕಡಿಮೆಯಾಗಲಿವೆ. ಸುರಕ್ಷಿತವಾಗಿ ಸಹ ಇರುತ್ತದೆ. ಆದ್ದರಿಂದ ಬೆಸ್ಕಾಂ ಈ ಕಾಮಗಾರಿ ಕೈಗೊಂಡಿದೆ.
ನಗರದ 7066 ಕಿ. ಮೀ. ಉದ್ದದ ಹೆಚ್‌ಟಿ, ಕಟ್ಟಡಗಳಿಗೆ ಸಂರ್ಪಕಿಸುವ ಎಲ್‌ಟಿ ತಂತಿಗಳನ್ನು 4 ವಿಭಾಗ ಮಾಡಿ ಭೂಗತ ಕೇಬಲ್ ಆಗಿ ಪರಿವರ್ತನೆ ಮಾಡಲಾಗುತ್ತಿದೆ. ಈ ಯೋಜನೆಯ ವೆಚ್ಚ ಸುಮಾರು 5031 ಕೋಟಿ ರೂ.ಗಳು.
2018-19ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರ ಭೂಗತ ಕೇಬಲ್ ಅಳವಡಿಕೆ ಮಾಡುವುದಾಗಿ ಘೋಷಣೆ ಮಾಡಿತು. 2019ರ ಸೆಪ್ಟೆಂಬರ್‌ನಲ್ಲಿ ಕಾಮಗಾರಿ ಆರಂಭವಾಗಿದೆ. 2022ರ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications