ಚಿಕ್ಕಬಳ್ಳಾಪುರದಲ್ಲಿ ಶಾಲೆಯ ಹೊಸ ಕಾಂಪೌಂಡ್ ಕುಸಿದು ವಿದ್ಯಾರ್ಥಿ ಸಾವು
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 4: ಶಾಲಾ ಕಾಂಪೌಂಡ್ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ದಿನ್ನೂರು ಸರ್ಕಾರಿ ಶಾಲೆಯಲ್ಲಿ ಮಂಗಳವಾರ ನಡೆದಿದೆ.
ಶಾಲಾ ಕಾಂಪೌಂಡ್ ಕುಸಿದು ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದು ಆತನನ್ನು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾನೆ. ಅರುಣ್ ಮೃತ ವಿದ್ಯಾರ್ಥಿ. ಕಳಪೆ ಕಾಮಗಾರಿಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೆಲವೇ ದಿನಗಳ ಹಿಂದೆಯಷ್ಟೇ ದಿನ್ನೂರು ಸರ್ಕಾರಿ ಶಾಲೆಯಲ್ಲಿ ನೂತನ ಕಾಂಪೌಂಡ್ ನಿರ್ಮಿಸಲಾಗಿತ್ತು, ಆದರೆ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿಯನ್ನು ಬಲಿತೆಗೆದುಕೊಂಡಿದೆ. ಕಳಪೆ ಗುಣಮಟ್ಟದ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕಟಣದ ನಡೆದಿದೆ.












Click it and Unblock the Notifications