ಬೆಂಗಳೂರು: ಮಾರಕ ಡೆಂಗ್ಯೂಗೆ ಬಾಲಕಿ ಬಲಿ

dengue
ಬೆಂಗಳೂರು, ಜು.17: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ದೀಪಿಕಾ (12) ಮೃತ ದುರ್ದೈವಿ.

ಕದಿರೇನಪಾಳ್ಯದ ಪೌರ ಕಾರ್ಮಿಕರ ಕಾಲೋನಿ ನಿವಾಸಿಯಾದ ದೀಪಿಕಾ ಕಳೆದ ನಾಲ್ಕೈದು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಬೌರಿಂಗ್‌ ಆಸ್ಪತ್ರೆಗೆ ಆರಂಭದಲ್ಲಿ ದಾಖಲಾಗಿದ್ದು,ಹೆಚ್ಚಿನ ಚಿಕಿತ್ಸೆಗೆ ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಹೆಚ್ಚಿನ ಚಿಕಿತ್ಸೆ ನೀಡಿದರೂ ಕಡಿಮೆ ಪೇಟ್‌‌‌‌‌ಲೆಟ್‌ ಇದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾಳೆ.[ಡೆಂಗ್ಯೂ ಜ್ವರದ ಲಕ್ಷಣಗಳೇನು?]

ರಾಜ್ಯದಲ್ಲಿ ಜನವರಿಯಿಂದ ಜುಲೈವರೆಗೆ 9,123 ಶಂಕಿತ ಡೆಂಗ್ಯೂ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಇದರಲ್ಲಿ 2,062 ಡೆಂಗ್ಯೂ ಪ್ರಕರಣಗಳು ಎಂದು ಖಚಿತವಾಗಿದೆ. ಹೆಚ್ಚಿನ ಡೆಂಗ್ಯೂ ಪ್ರಕರಣಗಳು ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ದಾಖಲಾಗುತ್ತಿವೆ ಬಿಬಿಎಂಪಿ ಆರೋಗ್ಯ ಇಲಾಖೆ ಹೇಳಿದೆ.

ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಿಬಿಎಂಪಿ ಆರೋಗ್ಯ ಘಟಕ, ಜನಜಾಗೃತಿ ಅಭಿಯಾನ ನಡೆಸಲು ಮುಂದಾಗುತ್ತಿದೆ. ಆರೋಗ್ಯ ಸಹಾಯಕರು ಮನೆ ಮನೆಗೆ ತೆರಳಿ, ಡೆಂಗ್ಯೂ ಬರದಂತೆ ತಡೆಗಟ್ಟುವ ಕುರಿತು ಮಾಹಿತಿ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+