ಬೆಂಗಳೂರಿನಲ್ಲಿ ವಿಷ ಸೇವಿಸಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು
ಬೆಂಗಳೂರು, ಆಗಸ್ಟ್ 14 : ಪತಿಯ ಕಿರುಕುಳ ತಾಳಲಾರದೇ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾಗಡಿಯಲ್ಲಿ ನಡೆದಿದೆ.
ಸರ್ಕಾರಿ ಶಾಲಾ ಶಿಕ್ಷಕಿಯಾಗಿರುವ ತೇಜಾವತಿ ಆತ್ಮಹತ್ಯೆಗೆ ಶರಣಾದ ದುರ್ದವೈ. ಗಂಡ ರಮೇಶನಿಗೆ ಅನೈತಿಕ ಸಂಬಂಧವಿದೆ ಎಂದು ಇಬ್ಬರ ನಡುವೆ ಇಂದು ಬೆಳಗ್ಗೆ ಜಗಳವಾಗಿದೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದರಿಂದ ತೇಜಾವತಿ ವಿಷ ಸೇವಿಸಿದ್ದಾರೆ.

ತೇಜಾವತಿಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೇಜಾವತಿ ಮೃತಪಟ್ಟಿದ್ದಾರೆ.
ರಮೇಶ್ ಹಾಗೂ ತೇಜಾವತಿ ದಂಪತಿ ಮದುವೆಯಾಗಿ 12 ವರ್ಷವಾಗಿದ್ದು, ಒಂದು ಮಗುವಿದೆ. ಗಂಡ ಹೆಂಡತಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ತೇಜಾವತಿಯ ಗಂಡ ರಮೇಶ್‍ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications