ನವೆಂಬರ್ 25 ರಂದು ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆ

ಬೆಂಗಳೂರು, ನವೆಂಬರ್ 22: ರಾಜ್ಯದ ಪ್ರೌಢಶಾಲೆಗಳ 9ನೇ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಉಚಿತ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯನ್ನು ರಾಜ್ಯಾದ್ಯಂತ ಸಂಘಟಿಸಲಾಗುತ್ತಿದೆ.

ಸ್ಪರ್ಧಾ ಮನೋಭಾವ, ಚುರುಕುತನ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ.

ಸದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿ ಈಗಾಗಲೇ 8396 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಸ್ಪರ್ಧೆಯ ಮೊದಲ ಹಂತವಾಗಿ ಜಿಲ್ಲಾ ಮಟ್ಟದ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯನ್ನು ರಾಜ್ಯದ ಎಲ್ಲ ವಲಯಗಳಲ್ಲಿ (ಬ್ಲಾಕ್)ಗಳಲ್ಲಿ ದಿನಾಂಕ ನ.25ರ ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ತಿಳಿಸಿದ್ದಾರೆ.

science maths olympiad competition for high school students

ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವ 3 ವಿದ್ಯಾರ್ಥಿಗಳಿಗೆ ತಲಾ 2,000 ರೂ.ಗಳ ನಗದು ಬಹುಮಾನ ಹಾಗು ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಮೈಸೂರಿನಲ್ಲಿ ಡಿಸೆಂಬರ್ 15-16 ರಂದು ಜರುಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.

ರಾಜ್ಯ ಮಟ್ಟದ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ವಿಜೇತ 3 ವಿದ್ಯಾರ್ಥಿಗಳಿಗೆ ತಲಾ 10,000 ರೂ. ನಗದು ಬಹುಮಾನ ಹಾಗು ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಲಾಗುವುದು.

ಈಗಾಗಲೇ ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಪರ್ಕಿಸಿ ಸ್ಪರ್ಧೆ ಜರುಗುವ ಸ್ಥಳದ ಮಾಹಿತಿ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+