ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವೆಂಬರ್ 25 ರಂದು ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆ

|
Google Oneindia Kannada News

ಬೆಂಗಳೂರು, ನವೆಂಬರ್ 22: ರಾಜ್ಯದ ಪ್ರೌಢಶಾಲೆಗಳ 9ನೇ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಉಚಿತ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯನ್ನು ರಾಜ್ಯಾದ್ಯಂತ ಸಂಘಟಿಸಲಾಗುತ್ತಿದೆ.

ಸ್ಪರ್ಧಾ ಮನೋಭಾವ, ಚುರುಕುತನ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ.

ಮೊಮೊ ಗೇಮ್: ಪೋಷಕರಿಗೆ ಎಚ್ಚರಿಕೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಮೊಮೊ ಗೇಮ್: ಪೋಷಕರಿಗೆ ಎಚ್ಚರಿಕೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ

ಸದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿ ಈಗಾಗಲೇ 8396 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಸ್ಪರ್ಧೆಯ ಮೊದಲ ಹಂತವಾಗಿ ಜಿಲ್ಲಾ ಮಟ್ಟದ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯನ್ನು ರಾಜ್ಯದ ಎಲ್ಲ ವಲಯಗಳಲ್ಲಿ (ಬ್ಲಾಕ್)ಗಳಲ್ಲಿ ದಿನಾಂಕ ನ.25ರ ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ತಿಳಿಸಿದ್ದಾರೆ.

science maths olympiad competition for high school students

ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವ 3 ವಿದ್ಯಾರ್ಥಿಗಳಿಗೆ ತಲಾ 2,000 ರೂ.ಗಳ ನಗದು ಬಹುಮಾನ ಹಾಗು ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು.

ಬೆಂಗಳೂರಿನಲ್ಲಿ ಐರ್ಲೆಂಡ್‍ನಲ್ಲಿ ಶಿಕ್ಷಣ ಮೇಳ, 20 ವಿವಿಗಳು ಭಾಗಿಬೆಂಗಳೂರಿನಲ್ಲಿ ಐರ್ಲೆಂಡ್‍ನಲ್ಲಿ ಶಿಕ್ಷಣ ಮೇಳ, 20 ವಿವಿಗಳು ಭಾಗಿ

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಮೈಸೂರಿನಲ್ಲಿ ಡಿಸೆಂಬರ್ 15-16 ರಂದು ಜರುಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.

ರಾಜ್ಯ ಮಟ್ಟದ ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ವಿಜೇತ 3 ವಿದ್ಯಾರ್ಥಿಗಳಿಗೆ ತಲಾ 10,000 ರೂ. ನಗದು ಬಹುಮಾನ ಹಾಗು ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಲಾಗುವುದು.

ಈಗಾಗಲೇ ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಪರ್ಕಿಸಿ ಸ್ಪರ್ಧೆ ಜರುಗುವ ಸ್ಥಳದ ಮಾಹಿತಿ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.

English summary
Karnataka state high school level sceince and mathematics olympiad competition will be held on November 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X