Breaking: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ
ಬೆಂಗಳೂರು, ಜುಲೈ 02: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ(61) ಇಂದು ನಿಧನರಾಗಿದ್ದಾರೆ.
ಏಳು ದಿನಗಳ ಹಿಂದೆ ಅವರಿಗೆ ಹೃದಯಾಘಾತ ಸಂಭವಿಸಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಸುಪ್ರಸಿದ್ಧ ವಿಜ್ಞಾನ ಬರಹಗಾರರಾಗಿದ್ದರು, ಡಿಆರ್‌ಡಿಒದ ಮಾಜಿ ವಿಜ್ಞಾನಿ, ಎಚ್‌ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್ ಆಗಿರುವ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.
ಅವರಿಗೆ ಏಳು ದಿನಗಳ ಹಿಂದೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಈ ಮಧ್ಯೆ ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿತ್ತು.
ಅವರಿಗೆ ಹೃದಯಾಘಾತ ಸಂಭವಿಸಿದ ಬಳಿಕ ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿತ್ತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆಯಲ್ಲಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿತ್ತು. ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ ಅವರಿಗೆ ಪ್ರಜ್ಞೆ ಇಲ್ಲವಾಗಿತ್ತು. ಹಾಲ್ದೊಡ್ಡೇರಿ ಸುಧೀಂದ್ರ ಅವರಿಗೆ ಕೆಲ ದಿನಗಳ ಹಿಂದೆ ಯಾವ ಪ್ರಮಾಣದ ಹೃದಯಾಘಾತವಾಗಿತ್ತೆಂದರೆ ಅವರ ಮೆದುಳಿಗೆ ಆಕ್ಸಿಜನ್ ಸರಬರಾಜು ಆಗುವುದು ನಿಂತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗದಾನ ಮಾಡಲಾಗುತ್ತದೆ. ಹಲವು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿದ್ದರು.
Recommended Video
ಖ್ಯಾತ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ ಅವರ ಮಗಳಾಗಿರುವ ಮೇಘನಾ ಅವರು ಬೆಂಗಳೂರಿನ ಮತ್ತು ಸ್ವರ್ಗದಂತಿದ್ದ ಜಯನಗರದ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಒನ್ಇಂಡಿಯಾದಲ್ಲಿ ಜಯನಗರದ ಹುಡುಗಿ ಎಂಬ ಅಂಕಣ ಬರೆದಿದ್ದಾರೆ..
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications