ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

|
Google Oneindia Kannada News

ಬೆಂಗಳೂರು, ಜುಲೈ 02: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ(61) ಇಂದು ನಿಧನರಾಗಿದ್ದಾರೆ.

ಏಳು ದಿನಗಳ ಹಿಂದೆ ಅವರಿಗೆ ಹೃದಯಾಘಾತ ಸಂಭವಿಸಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

Scientist, Writer Sudhindra Haldodderi Passes Away

ಸುಧೀಂದ್ರ ಹಾಲ್ದೊಡ್ಡೇರಿ ಸುಪ್ರಸಿದ್ಧ ವಿಜ್ಞಾನ ಬರಹಗಾರರಾಗಿದ್ದರು, ಡಿಆರ್‌ಡಿಒದ ಮಾಜಿ ವಿಜ್ಞಾನಿ, ಎಚ್‌ಎಎಲ್‌ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್ ಆಗಿರುವ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.

ಅವರಿಗೆ ಏಳು ದಿನಗಳ ಹಿಂದೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಈ ಮಧ್ಯೆ ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿತ್ತು.

ಅವರಿಗೆ ಹೃದಯಾಘಾತ ಸಂಭವಿಸಿದ ಬಳಿಕ ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿತ್ತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆಯಲ್ಲಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿತ್ತು. ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ ಅವರಿಗೆ ಪ್ರಜ್ಞೆ ಇಲ್ಲವಾಗಿತ್ತು. ಹಾಲ್ದೊಡ್ಡೇರಿ ಸುಧೀಂದ್ರ ಅವರಿಗೆ ಕೆಲ ದಿನಗಳ ಹಿಂದೆ ಯಾವ ಪ್ರಮಾಣದ ಹೃದಯಾಘಾತವಾಗಿತ್ತೆಂದರೆ ಅವರ ಮೆದುಳಿಗೆ ಆಕ್ಸಿಜನ್​ ಸರಬರಾಜು ಆಗುವುದು ನಿಂತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗದಾನ ಮಾಡಲಾಗುತ್ತದೆ. ಹಲವು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿದ್ದರು.

Recommended Video

ಭಾರತದ ಮೊದಲ ಮಹಿಳಾ ವೈದ್ಯೆ ಆನಂದಿ ಬಾಯಿಯ ಸ್ಪೂರ್ತಿದಾಯಕ ಕಥೆ | Oneindia Kannada

ಖ್ಯಾತ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ ಅವರ ಮಗಳಾಗಿರುವ ಮೇಘನಾ ಅವರು ಬೆಂಗಳೂರಿನ ಮತ್ತು ಸ್ವರ್ಗದಂತಿದ್ದ ಜಯನಗರದ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಒನ್ಇಂಡಿಯಾದಲ್ಲಿ ಜಯನಗರದ ಹುಡುಗಿ ಎಂಬ ಅಂಕಣ ಬರೆದಿದ್ದಾರೆ..

English summary
Scientist, Writer Sudhindra Haldodderi Passed Away Due Cardiac Arrest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X