ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಅವ್ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ಎಸ್‌ಡಿಪಿಐ ಆಗ್ರಹ

|
Google Oneindia Kannada News

ಬೆಂಗಳೂರು, ಮಾ. 03: ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆದರೆ ಸಾಲದು, ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಜಲೀಲ್ ಕೃಷ್ಣಾಪುರ, ಜನ ಪ್ರತಿನಿಧಿಗಳು ಶುದ್ದ ಚಾರಿತ್ರ್ಯ ಹೊಂದಿರಬೇಕು. ಆದರೆ ರಮೇಶ್ ಜಾರಕಿಹೊಳಿ ಅವರು, ಸೆಕ್ಯುಲರ್ ಮತಗಳನ್ನು ಪಡೆದು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಜೊತೆಗೆ ರಮೇಶ್ ಜಾರಕಿಹೋಳಿ ಅವರು ಆಪರೇಷನ್ ಕಮಲದ ಮುಖ್ಯ ರೂವಾರಿ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ್ ಜಾರಕಿಹೊಳಿ ಅವರು ಪ್ರಮುಖ ಕಾರಣಕರ್ತರು ಎಂದು ಆರೋಪಿಸಿದ್ದಾರೆ.

ರಾಜಕಾರಣಿಗಳು ಅದರಲ್ಲೂ ವಿಶೇಷವಾಗಿ ಬಿ.ಜೆ.ಪಿ ಮುಖಂಡರ ಸೆಕ್ಸ್‌ ಹಗರಣಗಳು ಆಗಾಗ ಬಹಿರಂಗವಾಗುತ್ತಿವೆ. ಈ ಪ್ರಕರಣದಿಂದ ಬಿಜೆಪಿ ಕೇವಲ ಭ್ರಷ್ಟಾಚಾರಿಗಳ ಮತ್ತು ಕೋಮುವಾದಿಗಳ ಪಕ್ಷ ಮಾತ್ರವಲ್ಲದೆ, ಆ ಪಕ್ಷದಲ್ಲಿ ನೈತಿಕತೆಯು ದುರ್ಬಲವಾಗಿದೆ ಎಂದು ಕೃಷ್ಣಾಪುರ ಅವರು ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡದಿದ್ದರೆ ಅವರನ್ನು ವಜಾ ಮಾಡಬೇಕು. ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

SDPI Demanded Dismissal Of Ramesh Jarkiholi From MLA Post

Recommended Video

ಅವರ ಬಗ್ಗೆ ಮಾತಾಡೋದು ನನಿಗೆ ಶೋಭೆ ತರಲ್ಲ !! | HDK | Oneindia Kannada

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾ. 02) ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್‌ಐಆರ್ ಆಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಅದು ನಕಲಿ ವಿಡಿಯೋ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

English summary
The Social Democratic Party of India (SDPI) has demanded the dismissal of Ramesh Jarakiholi from the MLA post and filing a criminal case. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X