Bengaluru Second Airport: 2ನೇ ವಿಮಾನ ನಿಲ್ದಾಣ ನಿರ್ಮಾಣ ನಡುವೆ: ಈ ರನ್ ವೇ ವಿಸ್ತರಣೆ ಚರ್ಚೆ
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ನಿರೀಕ್ಷೆಗಿಂತ ವಿಳಂಬವಾಗುತ್ತಿದೆ. ಇದೀಗ ಮತ್ತೊಂದು ರನ್ ವೇ ಪ್ರದೇಶಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ವಿಳಂಬವಾಗುತ್ತಲ್ಲೇ ಇದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಪ್ರಾಥಮಿಕ ವರದಿಯನ್ನೂ ನೀಡಿಲ್ಲ. ಈ ರೀತಿ ಇರುವಾಗಲೇ ಈಗಾಗಲೇ ಇರುವ ಮತ್ತೊಂದು ಜಕ್ಕೂರು ಎರೋ ಡ್ರೋಂ ರನ್ ವೇಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲಭ್ಯ ಸ್ಥಳವನ್ನು ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆಂದು ನ್ಯಾಯಾಲಯದ ಆದೇಶವಿದ್ದು, ನಮ್ಮ ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ, ನಂತರ ಅವರು ಈ ವಿವರವನ್ನು ಹಂಚಿಕೊಂಡಿದ್ದಾರೆ.
ಭೂಮಿ ಬೆಲೆ ಹೆಚ್ಚಳ: ಇನ್ನು ಬೆಂಗಳೂರಿನ ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದ್ದು, ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಆದರೆ ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗಿದೆ ಎಂದು ಇದೀಗ ಮುಖ್ಯಮಂತ್ರಿ ಸಿದ್ದರಾಮ್ಯಯ ಅವರೇ ಹೇಳಿದ್ದಾರೆ. ಇದರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಭೂಮಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ.
ಈ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆಯೂ ಚರ್ಚೆ ಜೋರಾಗಿದೆ. ರಾಜ್ಯ ಸರ್ಕಾರವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಪ್ರಕ್ರಿಯೆಯಲ್ಲಿ ಉತ್ಸುಕವಾಗಿದ್ದರೂ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ನೆರವು ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.












Click it and Unblock the Notifications