Second Airport: ಏರ್‌ಪೋರ್ಟ್ ಸ್ಥಾಪನೆಗೆ ಅಧಿಕಾರಿಗಳ ಮುಂದಿನ ಸವಾಲುಗಳು
ಬೆಂಗಳೂರು, ಜುಲೈ 24: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಿಸಲಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲಿ ಕಾಡತೊಡಗಿದೆ. ಈಗಾಗಲೇ ಬೆಂಗಳೂರಿನಿಂದ 50ರಿಂದ 60 ಕಿಲೋ ಮೀಟರ್ ದೂರದಲ್ಲೇ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಸದ್ಯ ಅಧಿಕಾರಿಗಳಿಗೆ ಇದೆಲ್ಲವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದೇ ಸವಾಲಾಗಿದೆ.
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸವಾಲುಗಳನ್ನು ಸ್ವೀಕರಿಸಿರುವ ಅಧಿಕಾರಿಗಳು ಮತ್ತು ಉದ್ಯಮಿಗಳು ಅಗತ್ಯ ಸಲಹೆಗಳನ್ನು ಕೇಳುತ್ತಿದ್ದಾರೆ. ಈ ಸಂಬಂಧ ಬುಧವಾರ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬೃಹತ್ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ವಿಸ್ತೃತ ಸಭೆ ನಡೆಯಿತು.

ಹೌದು, ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ವಲಯದ ಪ್ರಮುಖರ ಜತೆ ವಿಸ್ತೃತ ಚರ್ಚಿಸಿದ್ದಾರೆ.
ತಾಂತ್ರಿಕ ಅಂಶಗಳ ಕಡೆಗೆ ಹೆಚ್ಚು ಗಮನ: ಸಚಿವ
ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಸೇರಿದಂತೆ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ' ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಸಭೆ
ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು
ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಪಾಲ್ಗೊಂಡಿದ್ದರು.
ಒಂದು ವಿಮಾನ ನಿಲ್ದಾಣ ನಿರ್ಮಿಸಬೇಕಾದರೆ ಸುತ್ತಲೂ ಗುಡ್ಡ ಗಾಡು ಪ್ರದೇಶ, ಅಡತಡೆ ಇರಬಾರದು, ನಗರಕ್ಕೆ, ಮೆಟ್ರೋ, ಬಸ್ ಸಂಚಾರ, ಹೆದ್ದಾರಿಗೆ ಆ ನಿಲ್ದಾಣ ಹತ್ತಿರವಿರಬೇಕು. ಅಂತಹ ಪ್ರದೇಶಗಳ ಹುಡುಕಾಟ ನಡೆಯುತ್ತಿದೆ. ಈಗಾಗಲೇ ಐದಾರು ಕಡೆ ಜಾಗ ಗುರುತಿಸಲಾಗಿದೆ. ಸುಮಾರು ಐದು ಸಾವಿರಕ್ಕೂ ಅಧಿಕ ಎಕರೆ ಜಾಗ ಬೇಕಾಗಬಹುದು ಎನ್ನಲಾಗಿದೆ. ನಿರ್ಮಾಣದ ಪ್ರಾಥಮಿಕ ಹಂತದ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications