ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಇಂದಿನಿಂದ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ

|
Google Oneindia Kannada News

ಬೆಂಗಳೂರು,ಫೆಬ್ರವರಿ 09: ಬೆಂಗಳೂರಿನಲ್ಲಿ ಇಂದಿನಿಂದ ಎರಡನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯಲಿದೆ.

ಕೊರೊನಾ ಅಭಿಯಾನಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಹಾಗೂ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಲಸಿಕೆ ಪಡೆಯುವ ಮೂಲಕ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5934ಕ್ಕೆ ಇಳಿಕೆರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5934ಕ್ಕೆ ಇಳಿಕೆ

ಎರಡನೇ ಹಂತದ ಲಸಿಕೆ ಅಭಿಯಾನವನ್ನು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಗುತ್ತಿದೆ. ಈ ವೇಳೆ ಬಿಬಿಎಂಪಿ ಆಡಳಿತಾಧಿಕಾರಿ,ಆಯುಕ್ತರು, ವಿಶೇಷ ಆಯುಕ್ತರು, ಜಂಟಿ ಆಯುಕ್ತರು,ಮುಖ್ಯ ಎಂಜಿನಿಯರ್ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯ ನಿರ್ವಹಿಸುವ 1435 ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆಯಲಿದ್ದಾರೆ.

 Second Corona Vaccine Drive In Bengaluru From February 09

ಉಳಿದಂತೆ ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌರಕಾರ್ಮಿಕರು,ಆಯಾ ವಲಯದ ಅಧಿಕಾರಿ ಸಿಬ್ಬಂದಿ,ಪೊಲೀಶ್ ಶಿಕ್ಷಣ ಇಲಾಖೆಯ ಸಿಬ್ಬಂದಿ,ಕಂದಾಯ ಇಲಾಖೆ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಲಿದ್ದಾರೆ.

ಎರಡನೇ ಹಂತದದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಪೌರಕಾರ್ಮಿಕರು ಸೇರಿದಂತೆ 33 ಸಾವಿರ ನೌಕರರು ಹಾಗೂ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ 27 ಸಾವಿರ ಸಿಬ್ಬಂದಿ ಒಟ್ಟು 60 ಸಾವಿರಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಲಿದ್ದಾರೆ.

ರಾಜ್ಯದ ವಿವಿಧೆಡೆ ಸೋಮವಾರ ಜಿಲ್ಲಾಧಿಕಾರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ,ಉಪ ವಿಭಾಗಾಧಿಕಾರಿಗಳು ಲಸಿಕೆ ಪಡೆಯುವ ಮೂಲಕ ಮಾದರಿಯಾಗಿದ್ದಾರೆ.

Recommended Video

ಕಂದಾಯ,ಗ್ರಾಮೀಣಾಭಿವೃದ್ಧಿ ಸಿಬ್ಬಂದಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ | Oneindia Kannada

ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣೀ ಸಿಂಧೂರಿ,ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಎಂವಿ ವೆಂಕಟೇಶ್ ಲಸಿಕೆ ಪಡೆದರು.

English summary
In Bengaluru Second Corona Vaccine Drive Will Begins From February 09.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X