ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್

|
Google Oneindia Kannada News

Recommended Video

ಕರ್ನಾಟಕ 2nd ಪಿ ಯು ಸಿ ಪರೀಕ್ಷೆ 2018 : ಇಂದಿನಿಂದ ಆರಂಭ | Oneindia Kannada

ಬೆಂಗಳೂರು, ಮಾರ್ಚ್ 1 : ದ್ವಿತೀಯ ಪಿಯುಸಿ 2018 ನೇ ಸಾಲಿನ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 17 ರವರೆಗೆ ನಡೆಯಲಿದೆ.

2017-18 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ2017-18 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಒಟ್ಟು1004 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ 3.52 ಲಕ್ಷ ವಿದ್ಯಾರ್ಥಿಗಳು ಹಾಗೂ 3.37 ವಿದ್ಯಾಥಿನಿಯರಿದ್ದಾರೆ. ಪರೀಕ್ಷಾ ಭದ್ರತೆಗಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 32 ಜಂಟಿ ನಿರೀಕ್ಷಕ ಮೇಲ್ವಿಚಾರಕರನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುವುದರಿಂದ ಈ ಬಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರವೆಂದು ಗುರುತಿಸುವುದನ್ನು ಕೈಬಿಡಲಾಗಿದೆ.

Second PU exams resume Today

ಗುರುವಾರ ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆಗಳು ಜಿಲ್ಲಾ ಕೇಂದ್ರದಿಂದ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 6.30 ರಿಂದ ೮ರವರೆಗೆ ಅವಧಿಯಲ್ಲಿ ಸರಬರಾಜು ಆಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದು ಸೋರಿಕೆಗೆ ಅವಕಾಶವಿಲ್ಲ. ವದಂತಿಗಳಿಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಕಿವಿಗೊಡಬಾರದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷಾ ಕೇಂದ್ರವಿರುವ ನೂರು ಮೀಟರ್ ಅಂತರದಲ್ಲಿರುವ ಎಲ್ಲಾ ಜೆರಾಕ್ಸ್ ಶಾಪ್ ಗಳನ್ನು ಮುಚ್ಚಿಸಲಾಗಿದೆ.

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ... ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ...

English summary
Including 3.37 girls, total 6.90 lakhs students will face second year pre university exams from Thursday. This time CCTV cameras were installed in all exams centers in the state to curb malpractices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X