ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಶಾಸಕರ ರಹಸ್ಯ ಸಭೆ

|
Google Oneindia Kannada News

ಬೆಂಗಳೂರು, ಮೇ. 26: ಬಿ. ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಪದವಿಯಿಂದ ಕೆಳಗೆ ಇಳಿಸುವ ಯತ್ನದಲ್ಲಿ ನಾನಾ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿದ್ದಂತೆ ಅದಕ್ಕೆ ಇಂಬು ನೀಡುವ ದೊಡ್ಡ ಬೆಳವಣಿಗೆ ನಡೆದಿದೆ. ಉತ್ತರ ಕರ್ನಾಟಕದಲ್ಲಿ ನಡೆಯಬೇಕಿದ್ದ ಎಂಟು ಶಾಸಕರ ಸೀಕ್ರೇಟ್ ಮೀಟಿಂಗ್ ದೆಹಲಿಗೆ ಶಿಫ್ಟ್ ಅಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬೇಕು ಎಂಬ ಕೇಂದ್ರ ವರಿಷ್ಠರ ತೀರ್ಮಾನವನ್ನು ಬೆಂಬಲಿಸಿ ಬಿಜೆಪಿ ಪಕ್ಷದ ಎಂಟು ಶಾಸಕರು ದೆಹಲಿಯಲ್ಲಿ ಮಂಗಳವಾರ ರಹಸ್ಯ ಸಭೆ ಸೇರಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ನಾಯಕತ್ವ ಬದಲಾವಣೆ ಕುರಿತು ಚರ್ಚಿಸಲು ಯಡಿಯೂರಪ್ಪಅವರನ್ನು ದೆಹಲಿಗೆ ಬರವಂತೆ ಕೇಂದ್ರ ವರಿಷ್ಠರು ಸೂಚಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿರಲಿಲ್ಲ.ಬದಲಿಗೆ ವಿಜಯೇಂದ್ರ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಹೋಗಿದ್ದರು. ಯಡಿಯೂರಪ್ಪ ಬಾರದಿರುವುದಕ್ಕೆ ಕೇಂದ್ರ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ಸುದ್ದಿ ಬಂದಿದೆ.

ಸಿಎಂ ರೇಸ್‌ನಲ್ಲಿ ಉತ್ತರ ಕರ್ನಾಟಕದ ಈ ಬಿಜೆಪಿ ನಾಯಕ!?ಸಿಎಂ ರೇಸ್‌ನಲ್ಲಿ ಉತ್ತರ ಕರ್ನಾಟಕದ ಈ ಬಿಜೆಪಿ ನಾಯಕ!?

ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕಡಗಣನೆಗೆ ಒಳಗಾಗಿರುವ ಎಂಟು ಶಾಸಕರು ದೆಹಲಿಯಲ್ಲಿ ಸೇರಿದ್ದಾರೆ ಎನ್ನಲಾಗಿದೆ. ಸಿ.ಪಿ. ಯೋಗೀಶ್ವರ್, ಅರವಿಂದ್ ಬೆಲ್ಲದ್ ಮತ್ತಿತರ ಶಾಸಕರು ರಹಸ್ಯ ಸಭೆ ಸೇರಿ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ. ಕೇಂದ್ರ ಬಿಜೆಪಿ ವರಿಷ್ಠರು ನಾಯಕತ್ವ ಬದಲಾವಣೆಗೆ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಅದಕ್ಕೆ ಬೆಂಬಲವಿರುವ ಶಾಸಕರ ಪಟ್ಟಿ ಸಮೇತ ಕೆಲ ಮಹತ್ವದ ಮಾಹಿತಿಯನ್ನು ಕೇಂದ್ರ ವರಿಷ್ಠರಿಗೆ ಸಲ್ಲಿಸುವ ನಿಟ್ಟಿನಲ್ಲಿ ಈ ಸಭೆ ಸೇರಿದ್ದಾರೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಲಾಕ್ ಡೌನ್ ಮುಗಿದ ಕೂಡಲೇ ಸಿಎಂ ಚೇಂಜ್

ಲಾಕ್ ಡೌನ್ ಮುಗಿದ ಕೂಡಲೇ ಸಿಎಂ ಚೇಂಜ್

ಜೂನ್ 7 ಕ್ಕೆ ಲಾಕ್ ಡೌನ್ ಮುಗಿದ ಕೂಡಲೇ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವಯಸ್ಸು ಎಂಭತ್ತು ವರ್ಷ ದಾಟಿದೆ. ರಾಜ್ಯಕ್ಕೆ ಉತ್ತಮ ಆಡಳಿತ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದಾರೆ. ಕೋವಿಡ್ ನಿರ್ವಹಣೆ, ಬ್ಲ್ಯಾಕ್ ಫಂಗಸ್ ನಿರ್ವಹಣೆ, ಲಸಿಕೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ತೀರಾ ಅಸಹಾಕತೆಯನ್ನು ಪ್ರದರ್ಶಿಸಿದೆ.

ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ ಬಿಜೆಪಿ ಶಾಸಕರ ಸಭೆನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ ಬಿಜೆಪಿ ಶಾಸಕರ ಸಭೆ

ಕರ್ನಾಟಕದಲ್ಲಿ ಬಿಜೆಪಿ ವಿರೋಧಿ ಅಲೆ ಹೆಚ್ಚಾಗಿದೆ

ಕರ್ನಾಟಕದಲ್ಲಿ ಬಿಜೆಪಿ ವಿರೋಧಿ ಅಲೆ ಹೆಚ್ಚಾಗಿದೆ

ಈ ಪರಿಸ್ಥಿತಿ ಮುಂದಿಟ್ಟುಕೊಂಡು ಮುಂದಿನ ಎರಡು ವರ್ಷದಲ್ಲಿ ಎದುರಾಗಲಿರುವ ಚುಣಾವಣೆಗೆ ಹೋದರೆ ಬಿಜೆಪಿ ಪಕ್ಷ ಸಂಪೂರ್ಣ ನೆಲ ಕಚ್ಚಲಿದೆ. ಹೀಗಾಗಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಎಂಬ ತೀರ್ಮಾನಕ್ಕೆ ಕೇಂದ್ರ ವರಿಷ್ಠರು ಬಂದಿದ್ದಾರೆ. ಕೇಂದ್ರ ವರಿಷ್ಠರ ಯೋಜನೆಯಂತೆ ರಾಜ್ಯದಲ್ಲಿ ಪಂಚಮ ಸಾಲಿ ಲಿಂಗಾಯಿತರ ಹೋರಾಟ ಆರಂಭವಾದ ಕ್ಷಣವೇ ನಾಯಕತ್ವ ಬದಲಾವಣೆ ಆಗಬೇಕಿತ್ತು. ನಾನಾ ಬೆಳವಣಿಗೆಯಿಂದ ನಾಯಕತ್ವ ಬದಲಾವಣೆ ತೀರ್ಮಾನವನ್ನು ಮುಂದೂಡಿದ್ದರು. ಇದೀಗ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ವಿಫಲವಾಗಿರುವ ವಿಚಾರ ಮುಂದಿಟ್ಟುಕೊಂಡು ಯಡಿಯೂರಪ್ಪ ಬದಲಾವಣೆಗೆ ಕೇಂದ್ರ ವರಿಷ್ಠರು ತೀರ್ಮಾನಿಸಿದ್ದಾರೆ.

ರಾಜ್ಯ ನಾಯಕತ್ವ ಬದಲಾವಣೆ ವಿಚಾರ: ಬಿಜೆಪಿ ನಾಯಕರು ಏನಂದ್ರು?ರಾಜ್ಯ ನಾಯಕತ್ವ ಬದಲಾವಣೆ ವಿಚಾರ: ಬಿಜೆಪಿ ನಾಯಕರು ಏನಂದ್ರು?

ರಾಜ್ಯದಿಂದ ವರದಿ

ರಾಜ್ಯದಿಂದ ವರದಿ

ಇನ್ನು ಯಡಿಯೂರಪ್ಪ ಆಡಳಿತ, ವಿಜಯೇಂದ್ರ ಅವರ ಹಸ್ತಕ್ಷೇಪದಿಂದ ಬೇಸತ್ತ ಶಾಸಕರು ನಾಯಕತ್ವ ಬದಲಾವಣೆಗೆ ತುದಿಗಾಲಲ್ಲಿ ನಿಂತಿದ್ದಾರೆ ಮೇಲ್ನೋಟಕ್ಕೆ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದೇವೆ ಎಂದು ಬಿಂಬಿಸಿಕೊಂಡವರು ಕೂಡ ನಾಯಕತ್ವ ಬದಲಾವಣೆಗೆ ತೆರೆಮರೆಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ನಮ್ಮ ಕ್ಷೇತ್ರಗಳಿಗೆ ಅನುದಾನ ನೀಡಲ್ಲ. ಯಾವುದೇ ಸಮಸ್ಯೆಗೂ ಸ್ಪಂದಿಸುವುದಿಲ್ಲ. ಪ್ರತಿಯೊಂದು ಕೆಲಸದಲ್ಲಿ ಸಿಎಂ ಅವರ ಪುತ್ರ ಹಸ್ತಕ್ಷೇಪ ಮಾಡುತ್ತಾರೆ ಎಂದು ದೂರುತ್ತಿದ್ದ ಶಾಸಕರ ಜತೆ ನಿರಂತರ ಚರ್ಚಿಸಿ "ನಾಯಕತ್ವ ಬದಲಾವಣೆಯ ಕಾರಣಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರಕ್ಕೆ ರವಾನಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಿರುಸಿನ ಚಟುವಟಿಕೆ ಆರಂಭವಾಗುತ್ತಿದ್ದಂತೆ ಸಿಎಂ ಖುರ್ಚಿ ಮೇಲೆ ಅನೇಕರು ಕಣ್ಣಿಟ್ಟಿದ್ದಾರೆ. ಭವಿಷ್ಯದ ಚುನಾವಣೆ ಮುಂದಿಟ್ಟುಕೊಂಡು ಒಕ್ಕಲಿಗ ಸಮುದಾಯದ ನಾಯಕರನ್ನು ಕೇಂದ್ರ ನಾಯಕರು ಹುಡುಕಾಟ ಆರಂಭಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಒಂದಡೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸಿ.ಟಿ. .ರವಿ ಅವರು ಸಿಎಂ ಕುರ್ಚಿ ಮೇಲೆ ಕೂರಲು ತೆರೆ ಮರೆಯಲ್ಲಿ ಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Recommended Video

IPL ಮತ್ತೆ ಆರಂಭವಾದರೂ ಬೇಸರದ ವಿಚಾರವೇ ಹೆಚ್ಚು!! | Oneindia Kannada

English summary
Eight MLAs have held a secret meeting in Delhi in connection with Yediyurappa's leadership change.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X